ಬುಧವಾರ, ಆಗಸ್ಟ್ 10, 2022
21 °C
ನಾಳೆ ಅಧಿಕೃತವಾಗಿ ಘೋಷಣೆ

ಬಿಹಾರ ರಾಜಕೀಯ: ಜೀತನ್ ರಾಮ್ ಮಾಂಝಿ ಪಕ್ಷ ಎನ್‌ಡಿಎ ಜತೆ ವಿಲೀನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ನೇತೃತ್ವದ ಎಚ್‌ಎಎಂ(ಎಸ್‌) ಪಕ್ಷವು ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಎನ್‌ಡಿಎ ಒಕ್ಕೂಟದಲ್ಲಿ ಸೇರ್ಪಡೆಯಾಗಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಪಕ್ಷದ ಮುಖಂಡ ಮಾಂಝಿ ಅವರು ಗುರುವಾರ ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ವಕ್ತಾರ ಡ್ಯಾನಿಷ್ ರಿಜ್ವಾನ್ ಹೇಳಿದ್ದಾರೆ. ಬಿಹಾರದಲ್ಲಿ ಅಕ್ಟೋಬರ್– ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಪಕ್ಷವು ಬೆಂಬಲಿಸಿದೆ ಎಂದು ಪಕ್ಷದ ಮುಖಂಡ ಮಾಂಝಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು