ಪಟ್ನಾ: ಬಿಹಾರದಲ್ಲಿ ಅಧಿಕಾರದಿಂದ ವಂಚಿತವಾಗಿರುವ ಬಿಜೆಪಿಯು ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದೆ.

ಐದು ವರ್ಷಗಳ ಹಿಂದೆ ಹಿಂಬಾಗಿಲ ಮೂಲಕ ಸರ್ಕಾರ ರಚಿಸಲು ಕೈಜೋಡಿಸಿದ್ದ ಮುಖ್ಯಮಂತ್ರಿ ನಿತೀಶ್ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ.

ಪಟ್ನಾದ ಬೀರಚಂದ್ ಪಟೇಲ್ ಮಾರ್ಗದಲ್ಲಿರುವ ಪಕ್ಷದ ಕಚೇರಿ ಎದುರು ನಡೆದ ಬೃಹತ್ ಪ್ರತಿಭಟನೆಯಲ್ಲಿ ಬಿಹಾರದ ಎಲ್ಲಾ ಬಿಜೆಪಿ ಸಂಸದರು ಮತ್ತು ಶಾಸಕರು ಭಾಗವಹಿಸಿದ್ದರು. 71 ವರ್ಷದ ನಿತೀಶ್ ಅವರು ಎಸಗಿದ ದ್ರೋಹದ ಬಗ್ಗೆ ಆಂದೋಲನಗಳ ಮೂಲಕ ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ಪ್ರತಿಜ್ಞೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ‘ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ನಿತೀಶ್ ಕುಮಾರ್‌ಗೆ ಅಸೂಯೆ ಇದೆ. ಅವರಿಗೆ ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಇದೆ. ಬಿಜೆಪಿಯಿಂದ ದೂರವಾಗಲು ಈ ಆಸೆಯೇ ಕಾರಣ. ಮೈತ್ರಿಯನ್ನು ಊರುಗೋಲಾಗಿ ಬಳಸದೆ ಸ್ವಂತ ಬಲದಿಂದ ರಾಜ್ಯ ಚುನಾವಣೆಯಲ್ಲಿ ಗೆಲ್ಲಲು ನಿತೀಶ್ ಯತ್ನಿಸಲಿ’ ಎಂದು ಹೇಳಿದ್ದಾರೆ.

ಬಿಜೆಪಿಯ ಸಖ್ಯ ತೊರೆದ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಆರ್‌ಜೆಡಿ, ಕಾಂಗ್ರೆಸ್ ಪಕ್ಷಗಳ ಮಹಾಘಟಬಂಧನದಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ.

ಇದನ್ನೂ ಓದಿ...

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ: ತೇಜಸ್ವಿ ಡಿಸಿಎಂ

ಬಿಹಾರ: ಸಚಿವ ಸಂಪುಟದಲ್ಲಿ ಆರ್‌ಜೆಡಿ ಪ್ರಾಬಲ್ಯ, ನಿತೀಶ್ಗೆ ಗೃಹ ಖಾತೆ ಸಾಧ್ಯತೆ

2024ಕ್ಕೆ ಪ್ರಧಾನಿ ಅಭ್ಯರ್ಥಿಯಾಗುವರೇ ನಿತೀಶ್? ನಿಷ್ಠೆ ಮೇಲೆ ಎಲ್ಲರಿಗೂ ಅನುಮಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.