ಬುಧವಾರ, ಆಗಸ್ಟ್ 17, 2022
25 °C
ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ

ರಾಜ್ಯಸಭೆಯ ಉಪ ಸಭಾಪತಿ ಸ್ಥಾನಕ್ಕೆ ಆರ್‌ಜೆಡಿ ಪಕ್ಷದ ಮನೋಜ್ ಝಾ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜ್ಯಸಭೆಯ ಉಪ ಸಭಾಪತಿ ಸ್ಥಾನಕ್ಕೆ ಸೆ. 14ರಂದು ನಡೆಯಲಿರುವ ಚುನಾವಣೆಗೆ ವಿರೋಧಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಆರ್‌ಜೆಡಿ ಮುಖಂಡ ಮನೋಜ್ ಝಾ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಮನೋಜ್ ಝಾ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಮುಖಂಡರಾದ ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್, ಜೈರಾಂ ರಮೇಶ್, ಡಿಎಂಕೆ ನಾಯಕ ತಿರುಚಿ ಶಿವ, ಸಮಾಜವಾದ ಪಕ್ಷದ ಸಂಸದ ಜಾವೇದ್ ಅಲಿ  ಉಪಸ್ಥಿತರಿದ್ದರು.

‘ಈ ಚುನಾವಣೆಯು ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಆಡಳಿತ ಪಕ್ಷಕ್ಕೆ ವಿರೋಧಪಕ್ಷಗಳ ಮಾತನ್ನು ಆಲಿಸಲು ಕಲಿಯಿರಿ ಎನ್ನುವ ಬಲವಾದ ಸಂದೇಶ ಸಾರುವ ಸಲುವಾಗಿ ನಡೆಯಲಿರುವ ಚುನಾವಣೆ’ ಎಂದು ನಾಮಪತ್ರ ಸಲ್ಲಿಕೆ ಬಳಿಕ ಮನೋಜ್ ಝಾ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಯುನ ಹರಿವಂಶ್ ಅವರು ಉಪ ಸಭಾಪತಿ ಸ್ಥಾನಕ್ಕೆ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.

ಝಾ ಅವರಿಗೆ 12 ವಿರೋಧಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಎಎಪಿ ಮತ್ತು ಬಿಎಸ್‌ಪಿ ಕೂಡಾ ಬೆಂಬಲಿಸಿದರೆ 95 ಮತಗಳನ್ನು ಗಳಿಸುವ ಸಾಧ್ಯತೆ ಇದೆ. ಒಟ್ಟು 244 ಸದಸ್ಯ ಬಲವಿರುವ ರಾಜ್ಯಭೆಯಲ್ಲಿ 135 ಸದಸ್ಯರು ಬೆಂಬಲ ವ್ಯಕ್ತಪಡಿಸಿರುವುದರಿಂದ ಚುನಾವಣೆಯಲ್ಲಿ ಹರಿವಂಶ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ಸೆಪ್ಟೆಂಬರ್ 14ರಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು