ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಫಲಿತಾಂಶ: ಮತ ಎಣಿಕೆಯಲ್ಲಿ ಮೋಸ ನಡೆದಿದೆ, ಕಾಂಗ್ರೆಸ್ ಆರೋಪ

Last Updated 11 ನವೆಂಬರ್ 2020, 4:02 IST
ಅಕ್ಷರ ಗಾತ್ರ

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ವಂಚನೆ ನಡೆದಿದೆ. ಆಡಳಿತಾರೂಢ ಎನ್‌ಡಿಎ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಿಶನ್‌ಗಂಜ್ ಮತ್ತು ಸಕ್ರಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಆದರೂ ಅವರಿಗೆ ಪ್ರಮಾಣಪತ್ರ ನೀಡಿಲ್ಲ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಬಿಹಾರದಲ್ಲಿ ಇದ್ದಾರೆ.

ಕಿಶನ್‌ಗಂಜ್ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯು 1,266 ಮತಗಳಿಂದ ವಿಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಮನೆಗೆ ಕಳುಹಿಸಲಾಗಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.

‘ಬಿಹಾರ ಚುನಾವಣೆಯಲ್ಲಿ ನಾವು ಎಷ್ಟು ಫೋರ್ಜರಿಯನ್ನು ನೋಡಬೇಕು? ಕಿಶನ್‌ಗಂಜ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ 1,266 ಮತಗಳಿಂದ ಜಯಗಳಿಸಿದ್ದಾರೆ. ಆದರೂ ಅವರಿಗೆ ಗೆಲುವಿನ ಪ್ರಮಾಣಪತ್ರ ನೀಡಿಲ್ಲ. ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲಾಗುತ್ತಿದೆ. ಜನರ ತೀರ್ಪನ್ನು ಅಪಹರಿಸಲಾಗುತ್ತಿದೆ’ ಎಂದು ಸುರ್ಜೆವಾಲಾ ಮಂಗಳವಾರ ತಡರಾತ್ರಿ ಟ್ವೀಟ್ ಮಾಡಿದ್ದಾರೆ.

ಸಕ್ರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯು 600 ಮತಗಳಿಂದ ಗೆದ್ದಿದ್ದಾರೆ. ಆದರೆ ಅವರು 1,700 ಮತಗಳಿಂದ ಸೋತಿದ್ದಾರೆ ಅಂತ ಘೋಷಿಸಲಾಗಿದೆ ಎಂದು ಸುರ್ಜೆವಾಲಾ ಆರೋಪಿಸಿದ್ದಾರೆ.

ಇದಕ್ಕೂ ಮುನ್ನ, ಮಂಗಳವಾರ ರಾತ್ರಿ ಮಹಾಗಠಬಂಧನದ ನಾಯಕರು ಅಧಿಕಾರದ ದುರ್ಬಳಕೆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆದರೆ ಮತಎಣಿಕೆಯಲ್ಲಿ ಅಕ್ರಮ ನಡೆದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT