ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ– ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು

Last Updated 25 ಜುಲೈ 2022, 6:44 IST
ಅಕ್ಷರ ಗಾತ್ರ

ಸರನ್ (ಬಿಹಾರ): ಬಿಹಾರದ ಸರನ್ ಜಿಲ್ಲೆಯಲ್ಲಿ ಅಕ್ರಮ ಪಟಾಕಿ ಘಟಕದಲ್ಲಿ ಭಾನುವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಇಬ್ಬರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಕನಿಷ್ಠ ಐವರು ಸಾವಿಗೀಡಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟವು ಎಷ್ಟು ಪ್ರಬಲವಾಗಿದೆ ಎಂದರೆ ಅಕ್ರಮ ಪಟಾಕಿ ಕಾರ್ಖಾನೆ ಇದ್ದ ಖೋಡೈಬಾಗ್ ಬಜಾರ್‌ನಲ್ಲಿನ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಕಾರ್ಖಾನೆಯೊಳಗೆ ಇರಿಸಲಾಗಿದ್ದ ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿರುವ ಶಂಕೆ ಇದೆ ಎಂದು ಅವರು ಹೇಳಿದ್ದಾರೆ.

ಸ್ಥಳದಲ್ಲಿಯೇ ಮೃತಪಟ್ಟವರ ಪೈಕಿ ಅಕ್ರಮ ಕಾರ್ಖಾನೆಯ ಮಾಲೀಕ 22 ವರ್ಷದ ಶಬೀರ್ ಹುಸೇನ್ ಸಹ ಇದ್ದಾರೆ ಎಂದು ತಿಳಿದು ಬಂದಿದೆ.

ಮೃತರಲ್ಲಿ 35 ವರ್ಷದ ಮುಲಾಜಿಮ್, 32 ವರ್ಷದ ಶಬಾನಾ ಖಾತೂನ್ ಮತ್ತು ಐದು ವರ್ಷದ ಶಾಜಾದ್ ಸೇರಿದ್ದಾರೆ. ಘಟನೆಯಲ್ಲಿ ಸಾವಿಗೀಡಾಗಿರುವ ನಾಲ್ಕು ವರ್ಷದ ಇನ್ನೊಂದು ಮಗುವಿನ ಮೃತದೇಹ ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಇತರ ನಾಲ್ವರಲ್ಲಿ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಉತ್ತಮ ಚಿಕಿತ್ಸೆಗಾಗಿ ಪಾಟ್ನಾಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಅವಶೇಷಗಳಡಿಯಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ. ಪಾಟ್ನಾದ ವಿಧಿವಿಜ್ಞಾನ ತಜ್ಞರು ತನಿಖೆಯಲ್ಲಿ ಸ್ಥಳೀಯ ಪೊಲೀಸರಿಗೆ ಸಹಾಯ ಮಾಡುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT