ವಿಡಿಯೊ: ದೂರು ನೀಡಲು ಬಂದ ಮಹಿಳೆಯರಿಂದ ಮಸಾಜ್, ಪೊಲೀಸ್ ಅಧಿಕಾರಿ ಅಮಾನತು

ಪಟ್ನಾ: ದೂರು ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದ್ದ ಮಹಿಳೆಯರಿಂದ ಮಸಾಜ್ ಮಾಡಿಸಿಕೊಂಡಿದ್ದ ಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.
ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ನೌಹಟ್ಟಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಶಶಿಭೂಷಣ ಸಿನ್ಹಾ ಅವರನ್ನು ಅಮಾನತು ಮಾಡಲಾಗಿದೆ.
ಶಿಶಿಭೂಷಣ್ ಅವರು ಮಹಿಳೆಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.
ಶಶಿಭೂಷಣ ಸಿನ್ಹಾ ಅವರು ಶರ್ಟ್ ಇಲ್ಲದೆ ಮಹಿಳೆಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದು ಫೋನ್‌ನಲ್ಲಿ ಮಾತನಾಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
ನೌಹಟ್ಟಾ ಠಾಣೆಯ ಔಟ್‌ಪೋಸ್ಟ್‌ನಲ್ಲಿರುವ ವಸತಿ ಗೃಹದಲ್ಲಿ ವಿಡಿಯೊವನ್ನು ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ.
ಈ ವಿಡಿಯೊ ವೈರಲ್ ಆದ ಬೆನ್ನಲ್ಲೇ ಸಹರ್ಸಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್, ಶಶಿಭೂಷಣ ಸಿನ್ಹಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಓದಿ... Acharya Twitter Review: ಚಿರಂಜೀವಿ-ರಾಮ್ ಚರಣ್ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.