ನವದೆಹಲಿ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 27ರಂದು ನಡೆಸಲಿದೆ.
ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ. ನಾಗಾರತ್ನ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ.
ಅರ್ಜಿಗಳನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಮಾರ್ಚ್ 22ರಂದು ನಿರ್ದೇಶನ ನೀಡಿದ್ದರು. ಇದಕ್ಕಾಗಿ ಹೊಸ ನ್ಯಾಯಪೀಠವನ್ನು ರಚಿಸಲು ಕೂಡ ಒಪ್ಪಿಗೆ ಸೂಚಿಸಿದ್ದರು.
ಬಿಲ್ಕಿಸ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು ಜನವರಿ 4ರಂದು ಪರಿಶೀಲಿಸಿತ್ತು. ಬಳಿಕ ಬೇಲಾ ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.