ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಬಿಲ್ಕಿಸ್ ಬಾನು ಅತ್ಯಾಚಾರ ಅಪರಾಧಿ

Last Updated 27 ಮಾರ್ಚ್ 2023, 11:25 IST
ಅಕ್ಷರ ಗಾತ್ರ

ಅಹಮದಾಬಾದ್‌: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಲ್ಲಿ ಒಬ್ಬರಾದ ಶೈಲೇಶ್‌ ಭಟ್‌ ಜೊತೆ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಮತ್ತು ಸ್ಥಳೀಯ ಶಾಸಕ ವೇದಿಕೆ ಹಂಚಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿ ಸಂಸದ ಜಸ್ವಂತ್‌ಸಿನ್ಹಾ ಭಭೋರ್ ರ್ಮತ್ತು ಅವರ ಸಹೋದರ, ಲಿಮ್ಖೇಡಾದ ಬಿಜೆಪಿ ಶಾಸಕ ಶೈಲೇಶ್ ಭಭೋರ್ ಅವರು ದಾಹೋದ್ ಜಿಲ್ಲೆಯ ಲಿಮ್ಖೇಡಾ, ಸಿಂಗ್ವಾಡ್ ಮತ್ತು ಝಲೋದ್ ತಾಲೂಕಿನ 64 ಹಳ್ಳಿಗಳಿಗೆ ಗುಜರಾತ್‌ನ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ₹ 101.88 ಕೋಟಿ ವೆಚ್ಚದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಸಮಾರಂಭದಲ್ಲಿ ಅಪರಾಧಿ ಶೈಲೇಶ್ ಭಟ್ ಮೊದಲ ಸಾಲಿನಲ್ಲಿ ಕುಳಿತಿದ್ದ ವಿಡಿಯೊ ಮತ್ತು ಚಿತ್ರಗಳು ಚರ್ಚೆಯನ್ನು ಹುಟ್ಟುಹಾಕಿವೆ.

11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಹೇಳಿರುವ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT