ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಲಸಿಕೀಕರಣ ಮತ್ತು ತಂತ್ರಜ್ಞಾನ ಬಳಕೆಗೆ ಬಿಲ್ ಗೇಟ್ಸ್ ಮೆಚ್ಚುಗೆ

ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ತಂತ್ರಜ್ಞಾನದ ಸೂಕ್ತ ಬಳಕೆಯೊಂದಿಗೆ ಅತ್ಯಂತ ಸಮರ್ಥವಾಗಿ ಮತ್ತು ನಿರ್ವಹಿಸಲಾಗಿದೆ ಎಂದು ಮೈಕ್ರೋಸಾಫ್ಟ್ ಸಹ–ಸ್ಥಾಪಕ, ಉದ್ಯಮಿ ಬಿಲ್ ಗೇಟ್ಸ್ ಅಭಿಪ್ರಾಯಪಟ್ಟಿದ್ದಾರೆ.

ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿದ್ದ ಬಿಲ್ ಗೇಟ್ಸ್, ಲಸಿಕೀಕರಣವನ್ನು ಶ್ಲಾಘಿಸಿದ್ದಾರೆ.

ಭಾರತ, ಕೋವಿಡ್ ನಿರ್ವಹಣೆ ಮತ್ತು ಲಸಿಕೆ ಕಾರ್ಯಕ್ರಮಕ್ಕೆ ಕೈಗೊಂಡ ಕ್ರಮಗಳು ಮೆಚ್ಚುವಂಥಾದ್ದು. ಇದು ಜಗತ್ತಿನ ಇತರ ದೇಶಗಳಿಗೂ ಮಾದರಿ, ತಂತ್ರಜ್ಞಾನದ ಸಮರ್ಥ ಬಳಕೆಯ ಪ್ರಯೋಜನ ಜನರಿಗೆ ದೊರೆತಿದೆ ಎಂದು ಬಿಲ್ ಗೇಟ್ಸ್ ಹೇಳಿದ್ದಾರೆ.

ದೇಶದಲ್ಲಿ ಕೋವಿನ್ ಆ್ಯಪ್ ಮೂಲಕ ಲಸಿಕೆ ಕಾರ್ಯಕ್ರಮವನ್ನು ವ್ಯಾಪಕವಾಗಿ, ವಿವಿಧ ಹಂತಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

ದೇಶದಾದ್ಯಂತ ಒಟ್ಟು 193.13 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT