ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಅಧಿವೇಶನದಲ್ಲಿ ವಿದ್ಯುತ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ

Last Updated 16 ಜೂನ್ 2022, 20:13 IST
ಅಕ್ಷರ ಗಾತ್ರ

ನವದೆಹಲಿ:ದೂರಸಂಪರ್ಕ ಸೇವೆಯ ಕಂಪೆನಿಗಳನ್ನು ಬದಲಿಸುವ ರೀತಿಯಲ್ಲಿಯೇ ವಿದ್ಯುತ್‌ ಪೂರೈಕೆ ಕಂಪೆನಿಗಳನ್ನು ಬದಲಾಯಿಸುವುದಕ್ಕೆ ಗ್ರಾಹಕರಿಗೆ ಅವಕಾಶ ನೀಡುವ ವಿದ್ಯುತ್ (ತಿದ್ದುಪಡಿ) ಮಸೂದೆ 2021 ಅನ್ನು, ಜುಲೈನಲ್ಲಿ ಆರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ.

ಎಫ್‌ಐಸಿಸಿಐ ಗುರುವಾರ ಆಯೋಜಿಸಿದ್ದ ಭಾರತ ವಿದ್ಯುತ್‌ ಪ್ರಸರಣ ಶೃಂಗಸಭೆ 2022ರಲ್ಲಿ ಕೇಂದ್ರ ವಿದ್ಯುತ್‌ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್‌.ಕೆ.ಸಿಂಗ್‌ ಈ ವಿಷಯ ತಿಳಿಸಿದ್ದಾರೆ.

ಸ್ಪರ್ಧೆಯನ್ನು ಉತ್ತೇಜಿಸಲು ವಿತರಣಾ ವ್ಯವಹಾರವನ್ನು ಡಿ- ಲೈಸನ್ಸ್ ಮಾಡುವ, ಪ್ರತಿ ಆಯೋಗದಲ್ಲಿ ಕಾನೂನು ಹಿನ್ನೆಲೆಯ ಸದಸ್ಯರನ್ನು ನೇಮಿಸುವ, ವಿದ್ಯುತ್ ಮೇಲ್ಮನವಿ ನ್ಯಾಯಮಂಡಳಿಯನ್ನು (ಎಪಿಟಿಇಎಲ್‌) ಬಲಪಡಿಸುವ ಮತ್ತು ಗ್ರಾಹಕರ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಈ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿರುತ್ತದೆ ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT