ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ನಡುವೆ ಹಲವು ರಾಜ್ಯಗಳಲ್ಲಿ ಹಕ್ಕಿಜ್ವರ: 'ರಾಜ್ಯ ವಿಪತ್ತು' ಘೋಷಿಸಿದ ಕೇರಳ

ನಾಲ್ಕು ರಾಜ್ಯಗಳಲ್ಲಿ ಹಕ್ಕಿ ಜ್ವರ
Last Updated 5 ಜನವರಿ 2021, 11:21 IST
ಅಕ್ಷರ ಗಾತ್ರ

ತಿರುವನಂತಪುರ: ಕೋವಿಡ್‌–19 ಪಿಡುಗಿನ ವಿರುದ್ಧ ದೇಶ ಇನ್ನೂ ಹೋರಾಡುತ್ತಿರುವ ನಡುವೆ, ಕೆಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವುದು ಆತಂಕವನ್ನು ಹೆಚ್ಚಿಸಿದೆ.

ಎರಡು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿರುವ ಕಾರಣ, ಕೇರಳದಲ್ಲಿ ಈ ಕಾಯಿಲೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ಸೋಮವಾರ ಹಕ್ಕಿಜ್ವರದ ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಈಗಾಗಲೇ ಕಂಡುಬಂದಿವೆ. ಇದರೊಂದಿಗೆ ಒಟ್ಟು ನಾಲ್ಕು ರಾಜ್ಯಗಳಲ್ಲಿ ಈ ಕಾಯಿಲೆ ಕಾಣಿಸಿಕೊಂಡಂತಾಗಿದೆ.

‘ಕೇರಳದ ಅಳಪ್ಪುಳದ ಕಾರ್ತಿಪಳ್ಳಿ ಹಾಗೂ ಕುಟ್ಟನಾಡ, ಕೋಟ್ಟಯಂನ ನೀಂದೂರ್‌ನಲ್ಲಿ ಹಕ್ಕಿ ಜ್ವರದ ಪ್ರಕರಣಗಳು ವರದಿಯಾಗಿವೆ. ಈ ಜ್ವರದ ಪ್ರಸರಣ ತಡೆಯುವ ಸಲುವಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ರಾಜ್ಯ ಪಶು ಸಂಗೋಪನಾ ಇಲಾಖೆ ನಿರ್ದೇಶಕ ಡಾ.ಕೆ.ಎಂ.ದಿಲೀಪ್‌ ತಿಳಿಸಿದರು.

ಬೇರೆ ಜಿಲ್ಲೆಗಳಿಗೆ ರೋಗ ಹರಡದಂತೆ ಮಾಡಲು ಈಗಾಗಲೇ 50,000ದಷ್ಟು ಹಕ್ಕಿಗಳನ್ನು ಕೊಲ್ಲಲಾಗಿದೆ.

ಮುಂಜಾಗ್ರತಾ ಕ್ರಮವಾಗಿ, ಕೇರಳದಿಂದ ಕೋಳಿ ಹಾಗೂ ಮೊಟ್ಟೆಗಳನ್ನು ತರುವುದಕ್ಕೆ ತಮಿಳುನಾಡು ನಿರ್ಬಂಧ ವಿಧಿಸಿದೆ.

ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಪಾಂಗ್‌ ಅಣೆಕಟ್ಟು ಬಳಿ, ವಲಸೆ ಬಂದಿದ್ದ ಸಾವಿರಾರು ಹಕ್ಕಿಗಳು ಸತ್ತು ಬಿದ್ದಿದ್ದು, ಅವುಗಳು ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂಬುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT