ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಹಕ್ಕಿಜ್ವರ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ

Last Updated 8 ಜನವರಿ 2023, 21:09 IST
ಅಕ್ಷರ ಗಾತ್ರ

ತಿರುವನಂತಪುರ: ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮನುಷ್ಯರಿಗೆ ಸೋಂಕು ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಭಾನುವಾರ ಹೇಳಿದ್ದಾರೆ.

ಅಗತ್ಯ ಕ್ರಮ ಕೈಗೊಳ್ಳವಂತೆ ಎಲ್ಲಾ ಜಿಲ್ಲೆಗಳಿಗೂ ಎಚ್ಚರಿಕೆ ನೀಡಲಾಗಿದ್ದು, ಪ್ರತಿಯೊಬ್ಬರೂ ಆರೋಗ್ಯ ಇಲಾಖೆ ಹೊರಡಿಸಿದ ನಿರ್ದೇಶನಗಳನ್ನು ಅನುಸರಿಸಬೇಕು. ಬಾಧಿತ ಪ್ರದೇಶಗಳಲ್ಲಿನ ಜನರಲ್ಲಿ ಜ್ವರ ಮತ್ತು ಇತರ ರೋಗಲಕ್ಷಣಗಳನ್ನು ಆರೋಗ್ಯ ಇಲಾಖೆ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಕ ಬೆನ್ನು ನೋವು, ಜ್ವರ, ಕೆಮ್ಮು, ಉಸಿರಾಟದ ತೊಂದರೆ, ಶೀತ ಮತ್ತು ಕಫದಲ್ಲಿ ರಕ್ತ ಸೋಂಕಿನ ಲಕ್ಷಣಗಳಾಗಿವೆ. ಈ ರೋಗ ಲಕ್ಷಣ ಹಾಗೂ ಉಸಿರಾಟದ ತೊಂದರೆಗಳಿದ್ದರೆ ತಕ್ಷಣ ಸಮೀಪದ ಆರೋಗ್ರ ಕೇಂದ್ರ ಮತ್ತು ವೈದ್ಯರನ್ನು ಭೇಟಿ ಮಾಡಬೇಕು. ಸೋಂಕಿತ ಮತ್ತು ಆರೋಗ್ಯಕರ ಪಕ್ಷಿಗಳೊಂದಿಗೆ ಸಂಪರ್ಕಕ್ಕೆ ಬರುವವರು ಕೈಗವಸು, ಮುಖಗವಸು ಧರಿಸುವುದು ಮತ್ತು ಆಗಾಗ್ಗೆ ಕೈಗಳನ್ನು ತೊಳೆಯುವಂತಹ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಶನಿವಾರ, ಕೊಟ್ಟಾಯಂ ಜಿಲ್ಲೆಯ ಚೆಂಪು ಪಂಚಾಯತ್‌ ವಾರ್ಡ್‌ ಒಂದರಲ್ಲಿ ಹಕ್ಕಿ ಜ್ವರ ದೃಢಪಟ್ಟಿದ್ದು, ಬಾತುಕೋಳಿಗಳು, ಕೋಳಿಗಳು ಸೇರಿದಂತೆ 1,317 ಪಕ್ಷಿಗಳನ್ನು ಕೊಲ್ಲಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT