ಭಾನುವಾರ, ಅಕ್ಟೋಬರ್ 24, 2021
28 °C

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಮೋದಿ ಸೇರಿ ಗಣ್ಯರಿಂದ ಹುಟ್ಟುಹಬ್ಬದ ಶುಭಾಶಯ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಜನ್ಮದಿನದ ಶುಭಾಶಯ ಕೋರಿದ್ದಾರೆ.

‘ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಭಗವಂತ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಡಾ.ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನರೇಗಾ, ಮಾಹಿತಿ ಹಕ್ಕಿ ಕಾಯ್ದೆ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್, ಶಿಕ್ಷಣ ಹಕ್ಕಿನ ಕಾಯ್ದೆ, ರಾಷ್ಟ್ರೀಯ ಸಂಸ್ಥೆಗಳಲ್ಲಿ ಮೀಸಲಾತಿ, ನಾಗರಿಕ ಪರಮಾಣು ಒಪ್ಪಂದ... ಸಿಂಗ್ ಅವರ ಅನೇಕ ಕೊಡುಗೆಗಳಲ್ಲಿ ಇವು ಕೆಲವು’ ಎಂದು ಕರ್ನಾಟಕ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಮಾಜಿ ಪ್ರಧಾನಿ, ದೂರದೃಷ್ಟಿಯ ಅರ್ಥಶಾಸ್ತ್ರಜ್ಞ ಮತ್ತು ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕರುಣಿಸಲಿ. ಅವರ ಚಾಣಾಕ್ಷ ನಾಯಕತ್ವ, ಸೇವೆಯಲ್ಲಿ ಸಮರ್ಪಣಾ ಮನೋಭಾವ ಮತ್ತು ಮಹಾನ್ ರಾಜನೀತಿ ಎಲ್ಲರಿಗೂ ನಿಜವಾದ ಸ್ಫೂರ್ತಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

‘ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘಾಯುಷ್ಯ, ಆರೋಗ್ಯಕರ ಮತ್ತು ಸಂತೋಷದ ಜೀವನ ಅವರದ್ದಾಗಲಿ ಎಂದು ಆಶಿಸುತ್ತೇನೆ. ಯುಪಿಎ ಸರ್ಕಾರ ಅವಧಿಯಲ್ಲಿ ಅವರ ನಾಯಕತ್ವಕ್ಕಾಗಿ, ಆರ್ಥಿಕತೆಯನ್ನು ದೃಢಗೊಳಿಸಿದ್ದಕ್ಕಾಗಿ, ಲಕ್ಷಾಂತರ ಜನರನ್ನು ಬಡತನದಿಂದ ಹೊರತಂದಿದ್ದಕ್ಕಾಗಿ ಮತ್ತು ರಾಷ್ಟ್ರೀಯ ಹಿತಾಸಕ್ತಿಗಾಗಿ ಅವಿಶ್ರಾಂತವಾಗಿ ಕೆಲಸ ಮಾಡಿದ್ದಕ್ಕಾಗಿ ನಾವು ಅವರಿಗೆ ಧನ್ಯವಾದ ಅರ್ಪಿಸುತ್ತೇವೆ’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು