ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ನಿಂದ ಬಿಐಎಸ್‌ ಹೆಲ್ಮೆಟ್‌ ಮಾತ್ರ ತಯಾರಿಕೆ

Last Updated 27 ನವೆಂಬರ್ 2020, 21:24 IST
ಅಕ್ಷರ ಗಾತ್ರ

ನವದೆಹಲಿ: ‘ಭಾರತದಲ್ಲಿ 2021ರ ಜೂನ್‌ 1ರ ನಂತರ ಬಿಐಎಸ್‌ ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ತಯಾರಿಸಲು ಅವಕಾಶ ನೀಡಲಾಗುವುದು’ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ.

ಗುರುವಾರ ಈ ಕುರಿತ ಅಧಿಕೃತ ಆದೇಶ ಹೊರಡಿಸಲಾಗಿದೆ. ಕಡ್ಡಾಯವಾಗಿ ಬಿಐಎಸ್‌ ಪ್ರಮಾಣಪತ್ರ ಹೊಂದಿರಬೇಕಾದ ಮತ್ತು ಗುಣಮಟ್ಟ ಪ್ರಮಾಣೀಕರಣ ಅಗತ್ಯವಾಗಿರು ಉತ್ಪನ್ನಗಳ ಸಾಲಿಗೆದ್ವಿಚಕ್ರ ವಾಹನ ಸವಾರರು ಧರಿಸುವ ಹೆಲ್ಮೆಟ್‌ಗಳನ್ನು ಸೇರಿಸಲಾಗಿದೆ.

2019ರಲ್ಲಿ ದೇಶದಲ್ಲಿ ಹೆಲ್ಮೆಟ್‌ ಧರಿಸದ ಕಾರಣಕ್ಕೆ 30,148 ಮಂದಿ ದ್ವಿಚಕ್ರ ವಾಹನ ಚಾಲಕರು ಹಾಗೂ 14,516 ಮಂದಿ ಹಿಂಬದಿ ಸವಾರರು ಅಪಘಾತದಿಂದ ಸಾವಿಗೀಡಾಗಿದ್ದಾರೆ. ದೇಶದಲ್ಲಿ ವಾರ್ಷಿಕ 1.7 ಕೋಟಿ ದ್ವಿಚಕ್ರ ವಾಹನಗಳನ್ನು ತಯಾರಿಸಲಾಗುತ್ತದೆ.

ದೇಶದ ಹವಾಮಾನಕ್ಕೆ ಹೊಂದಿಕೆಯಾಗುವಂಥ, ಕಡಿಮೆ ತೂಕದ ಹೆಲ್ಮೆಟ್‌ಗಳನ್ನು ತಯಾರಿಸುವ ಸಾಧ್ಯತೆಯ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಅದರ ಪ್ರಕಾರ ರಚಿಸಲಾಗಿದ್ದ ಸಮಿತಿಯು 2018ರ ಮಾರ್ಚ್‌ನಲ್ಲಿ ನೀಡಿದ್ದ ವರದಿಯಲ್ಲಿ ಕಡಿಮೆ ತೂಕದ ಹೆಲ್ಮೆಟ್‌ ಬಳಕೆಗೆ ಶಿಫಾರಸು ಮಾಡಲಾಗಿತ್ತು. ಈ ವರದಿಯನ್ನು ಅಂಗೀಕರಿಸಿದ ಸರ್ಕಾರವು ಬಿಐಎಸ್‌ ಪ್ರಮಾಣೀಕರಣ ನಿಯಮಾವಳಿಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಿದೆ.

‘ಈ ನಿರ್ಧಾರದಿಂದಾಗಿ ಕಳಪೆ ಗುಣಮಟ್ಟದ ಹೆಲ್ಮೆಟ್‌ ಮಾರಾಟಕ್ಕೆ ಕಡಿವಾಣ ಬೀಳಲಿದೆ. ಇದರಿಂದಾಗಿ ಅಪಘಾತಕ್ಕೆ ಒಳಗಾಗಿ ಸಾಯುವ ದ್ವಿಚಕ್ರವಾಹನ ಸವಾರರ ಸಂಖ್ಯೆಯೂ ಕಡಿಮೆಯಾಗಲಿದೆ’ ಎಂದು ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT