ರಾಜ್ಯಸಭೆ ಉಪ ಸಭಾಪತಿ ಹುದ್ದೆ: ಹರಿವಂಶಗೆ ಬಿಜೆಡಿ ಬೆಂಬಲ

ಭುವನೇಶ್ವರ: ‘ರಾಜ್ಯಸಭೆ ಉಪ ಸಭಾಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹರಿವಂಶ ನಾರಾಯಣ ಸಿಂಗ್ ಅವರನ್ನು ನಾವು ಬೆಂಬಲಿಸುತ್ತೇವೆ’ ಎಂದು ಬಿಜು ಜನತಾ ದಳದ (ಬಿಜೆಡಿ) ಅಧ್ಯಕ್ಷ ಹಾಗೂ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೋಮವಾರ ತಿಳಿಸಿದ್ದಾರೆ.
‘ಬಿಹಾರದ ಮುಖ್ಯಮಂತ್ರಿ ಹಾಗೂ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಸೋಮವಾರ ಬೆಳಿಗ್ಗೆ ಕರೆ ಮಾಡಿ ಪಟ್ನಾಯಕ್ ಅವರೊಂದಿಗೆ ಮಾತನಾಡಿದ್ದಾರೆ. ಹೀಗಾಗಿ ಅವರು ಹರಿವಂಶ ಅವರಿಗೆ ಬೆಂಬಲ ಸೂಚಿಸಲು ತೀರ್ಮಾನಿಸಿದ್ದಾರೆ’ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಜೆಡಿಯು ಸಂಸದರಾಗಿರುವ ಹರಿವಂಶ ಅವರು ಬುಧವಾರ ಉಪ ಸಭಾಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು.
ಒಡಿಶಾದ 10 ರಾಜ್ಯಸಭಾ ಸದಸ್ಯರ ಪೈಕಿ ಒಂಬತ್ತು ಮಂದಿ ಬಿಜೆಡಿಯವರೇ ಇದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.