ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಪ್ರಲ್ಹಾದ್ ಜೋಶಿ

Last Updated 29 ಮಾರ್ಚ್ 2023, 10:39 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ವ್ಯಕ್ತಪಡಿಸಿದ್ದಾರೆ.

ಇಂದು(ಬುಧವಾರ) ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ ಅವರು ಮಾತನಾಡಿದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಮತ್ತು ಕರ್ನಾಟಕದ ಧಾರವಾಡ ಕ್ಷೇತ್ರದ ಸಂಸದ ಜೋಶಿ, ರಾಜ್ಯದ ಅಭಿವೃದ್ಧಿಗಾಗಿ ತನ್ನ ಸರ್ಕಾರದ ‘ಐತಿಹಾಸಿಕ’ ಕೆಲಸಗಳಿಂದಾಗಿ ಸತತ ಎರಡನೇ ಬಾರಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು.

'ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಮ್ಮ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಗಮನಿಸಿದರೆ, ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಜನರು ಕಾಂಗ್ರೆಸ್‌ನ ಇತಿಹಾಸವನ್ನು ತಿಳಿದಿರುವ ಕಾರಣದಿಂದ ಸತತ ಎರಡನೇ ಅವಧಿಗೆ ಬಿಜೆಪಿಗೆ ಅಧಿಕಾರ ನೀಡಲು ಉತ್ಸುಕರಾಗಿದ್ದಾರೆ ಎಂದು ಅವರು ಹೇಳಿದರು.

‘ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡಿದೆ. ಛತ್ತೀಸ್‌ಗಢ, ರಾಜಸ್ಥಾನ ಮತ್ತು ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಅವರು ಆರೋಪಿಸಿದರು.

‘ಅಭಿವೃದ್ಧಿ ಆಗಬೇಕಾದರೆ, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ ಬಿಜೆಪಿಗೆ ಪೂರಕ ವಾತಾವರಣ ಗೋಚರಿಸುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, 224 ಸದಸ್ಯ ಬಲದ ವಿಧಾನಸಭಾ ಚುನಾವಣೆಗೆ ಏಪ್ರಿಲ್ 13 ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT