ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ವಿವಾದ| ಬೊಮ್ಮಾಯಿ ಹೇಳಿಕೆ ಕುರಿತು ಬಿಜೆಪಿಯ ದಿವ್ಯ ಮೌನ: ಎನ್‌ಸಿಪಿ ಟೀಕೆ

Last Updated 3 ಡಿಸೆಂಬರ್ 2022, 20:18 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮಹಾರಾಷ್ಟ್ರದ ಕನ್ನಡ ಭಾಷಿಕ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಹೇಳಿಕೆ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಬಿಜೆಪಿ ಮೌನ ವಹಿಸಿರುವುದನ್ನು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ) ಶನಿವಾರ ಪ್ರಶ್ನಿಸಿದೆ.

‘ಗಡಿ ಬಿಕ್ಕಟ್ಟಿಗೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ನೀಡಿರುವ ಹೇಳಿಕೆಗಳಿಗೆ ಮತ್ತು ಎತ್ತಿರುವ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ, ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಬಿಜೆಪಿ ಏಕೆ ಈ ವಿಚಿತ್ರವಾದ ಮೌನವನ್ನು ಮುಂದುವರೆಸಿದೆ’ ಎಂದು ಎನ್‌ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡೆ ಕ್ರಾಸ್ಟೊ ಪ್ರಕಟಣೆಯೊಂದರಲ್ಲಿ ಹೇಳಿದ್ದಾರೆ.

‘ಈ ವಿಷಮ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರಬಾರದು’ ಎಂದು ಬೊಮ್ಮಾಯಿ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ಅವರು, ‘ಉಭಯ ರಾಜ್ಯಗಳು ಚರ್ಚೆ ನಡೆಸುವುದರಿಂದ ಸಮಸ್ಯೆಗೆ ಪರಿಹಾರ ದೊರಕುತ್ತದೆ. ಆದರೆ ಬೊಮ್ಮಾಯಿ ಅವರು ಏಕೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT