ಗುರುವಾರ , ಏಪ್ರಿಲ್ 15, 2021
22 °C

ಮದನ್ ಕೌಶಿಕ್ ಉತ್ತರಾಖಂಡ ಬಿಜೆಪಿ ಘಟಕದ ಅಧ್ಯಕ್ಷ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹರಿದ್ವಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿರುವ ಮದನ್‌ ಕೌಶಿಕ್ ಅವರನ್ನು ಉತ್ತರಾಖಂಡ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಪಕ್ಷ ನೇಮಿಸಿದೆ.

ಇದುವರೆಗೆ ಅಧ್ಯಕ್ಷರಾಗಿದ್ದ ಶಾಸಕ ಬಂಶಿಧರ್‌ ಭಾಗವತ್ ಅವರು, ನೂತನ ಮುಖ್ಯಮಂತ್ರಿ ತಿರತ್ ಸಿಂಗ್‌ ರಾವತ್‌ ಸರ್ಕಾರದಲ್ಲಿ ಸಚಿವರಾಗುವ ನಿರೀಕ್ಷೆ ಇದೆ. 

ಉತ್ತರಾಖಂಡದಲ್ಲಿ ರಜಪೂತರು ಮತ್ತು ಬ್ರಾಹ್ಮಣರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ನೂತನ ಮುಖ್ಯಮಂತ್ರಿ ತೀರಥ್‌ ಸಿಂಗ್ ರಾವತ್‌‌ ರಜಪೂತ ಸಮುದಾಯಕ್ಕೆ ಸೇರಿದವರು. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಬ್ರಾಹ್ಮಣ ಸಮುದಾಯದವರ ನೇಮಕಾತಿ ನಡೆದಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು