ಸೋಮವಾರ, ಆಗಸ್ಟ್ 15, 2022
27 °C

ತ್ರಿಪುರಾ ಸಿಎಂ ಮಾಣಿಕ್‌ ಸಾಹಾಗೆ ಜಯ: 4 ಸ್ಥಾನಗಳಲ್ಲಿ ಬಿಜೆಪಿಗೆ 3, ಕಾಂಗ್ರೆಸ್ 1

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಗರ್ತಲಾ: ತ್ರಿಪುರಾದ ಮುಖ್ಯಮಂತ್ರಿ ಮಾಣಿಕ್‌ ಸಾಹಾ ಅವರು ಬರ್ದೊವಾಲಿ ವಿಧಾನಸಭಾ ಕ್ಷೇತ್ರದಿಂದ ಜಯ ಸಾಧಿಸಿದ್ದಾರೆ.

ಮಾಣಿಕ್‌ ಸಹಾ ಅವರು 6 ಸಾವಿರ ಮತಗಳಿಂದ ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. 

ತ್ರಿಪುರಾದ ಅಗರ್ತಲಾ, ಜುಬಾರಾಜ್‌ನಗರ್‌, ಸುರ್ಮಾ ಹಾಗೂ ಬರ್ದೊವಾಲಿ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸಾಹಾ ಅವರು ಬರ್ದೊವಾಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವರಿಗೆ ಈ ಗೆಲುವು ಅನಿವಾರ್ಯವಾಗಿತ್ತು.

4 ಸ್ಥಾನಗಳ ಪೈಕಿ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್‌ ಅಗರ್ತಲಾ ಕ್ಷೇತ್ರದಿಂದ ಗೆಲುವು ಕಂಡಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ. 

ವಿಪ್ಲವ್‌ ದೇವ್‌ ಅವರು ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಕಳೆದ ತಿಂಗಳು, ರಾಜ್ಯಸಭಾ ಸದಸ್ಯ ಮಾಣಿಕ್‌ ಸಾಹಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು