ಜಲ್ಪೈಗುರಿ (ಪ.ಬಂಗಾಳ): ಪ್ರಚಾರಕ್ಕಾಗಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹೊರಗಿನವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತಂದಿರುವ ಕಾರಣ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿವೆಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ರಾಜ್ಯದ ಬಹುಪಾಲು ಜನರಿಗೆ ಲಸಿಕೆ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸುತ್ತಿಲ್ಲ. ಇದರಿಂದ ಕೊರೊನಾವೈರಸ್ ಸಾಂಕ್ರಾಮಿಕ ರೋಗವು ಜಾಸ್ತಿಯಾಗಿ ಹರಡುತ್ತಿವೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ವಿದೇಶಿ ಲಸಿಕೆಗೆ ಅನುಮೋದನೆ: ಕೇಂದ್ರದ ನಡವಳಿಕೆಗೆ ರಾಹುಲ್ ಆಕ್ಷೇಪ

ಬಿಜೆಪಿ ನಾಯಕರು ಹೊರಗಿನವರನ್ನು ಪ್ರಚಾರಕ್ಕಾಗಿ ಕರೆ ತಂದಿದ್ದಾರೆ. ಇದರಿಂದ ಕೋವಿಡ್ ಪ್ರಕರಣಗಳು ಜಾಸ್ತಿಯಾಗಿವೆ. ನಾವು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದರೆ ಅವರು (ಬಿಜೆಪಿ) ವಿಷಯವನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ ಎಂದು ಹೇಳಿದ್ದಾರೆ.

24 ಗಂಟೆಗಳ ಕಾಲ ಪ್ರಚಾರ ಮಾಡುವುದನ್ನು ಚುನಾವಣಾ ಆಯೋಗ ನಿಷೇಧ ಹೇರಿರುವ ಕುರಿತು ಪ್ರತಿಕ್ರಿಯಿಸಿದ ಮಮತಾ, 'ಹಿಂದೂಗಳು, ಮುಸ್ಲಿಮರು ಮತ್ತು ಇತರರಲ್ಲಿ ಒಟ್ಟಾಗಿ ಮತ ಚಲಾಯಿಸುವಂತೆ ಕೇಳಿಕೊಳ್ಳುವುದು ತಪ್ಪೇ? ಪ್ರತಿ ಚುನಾವಣಾ ಸಭೆಯಲ್ಲಿ ನನ್ನನ್ನು ಅಪಹಾಸ್ಯ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.