ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯನಿರ್ವಹಿಸದ ಮುಖ್ಯಮಂತ್ರಿಗಳನ್ನು ಬದಲಿಸುವಲ್ಲಿ ಬಿಜೆಪಿ ನಿರತ: ಪಿ.ಚಿದಂಬರಂ

Last Updated 13 ಸೆಪ್ಟೆಂಬರ್ 2021, 15:33 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ತನ್ನ 'ಕಾರ್ಯನಿರ್ವಹಿಸದ' ಮುಖ್ಯಮಂತ್ರಿಗಳನ್ನು ಬದಲಿಸುವಲ್ಲಿ ನಿರತವಾಗಿದೆ ಆದರೆ ಅಂಥವರ ಪಟ್ಟಿ ಉದ್ದವಾಗಿದೆ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಸೋಮವಾರ ಹೇಳಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ರಾಜೀನಾಮೆ ನೀಡಿದ್ದರು. ಬಳಿಕ ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಪಿ.ಚಿದಂಬರಂ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

'ಬಿಜೆಪಿ ತನ್ನ ಕೆಲಸ ಮಾಡದ ಮುಖ್ಯಮಂತ್ರಿಗಳನ್ನು ಬದಲಿಸುವಲ್ಲಿ ನಿರತವಾಗಿದೆ. ಅವರು ಕೆಲಸವನ್ನೇ ಮಾಡದ ಸಿಎಂಗಳು ಎಂದು ಬಿಜೆಪಿ ನಾಯಕತ್ವಕ್ಕೆ ಯಾವಾಗ ಅರ್ಥವಾಯಿತು' ಎಂದು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಗುಜರಾತಿನಲ್ಲಿ ರೂಪಾನಿಗಿಂತ ಮೊದಲು, ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ ಬಿಜೆಪಿಯು, ಬಸವರಾಜ ಬೊಮ್ಮಾಯಿ ಅವರನ್ನು ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ನೇಮಿಸಿತು.

ಉತ್ತರಾ ಖಂಡದಲ್ಲಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಮುನ್ನ ಬಿಜೆಪಿಯು ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಕೆಳಗಿಳಿಸಿ ತೀರತ್ ಸಿಂಗ್ ರಾವತ್ ಅವರನ್ನು ನೇಮಿಸಿತ್ತು. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಉತ್ತರಾಖಂಡವು ಮೂರು ಮುಖ್ಯಮಂತ್ರಿಗಳನ್ನು ಕಂಡಿದೆ.

ಬಿ.ಎಸ್. ಯಡಿಯೂರಪ್ಪ, ಇಬ್ಬರು ರಾವತ್‌ಗಳು ಮತ್ತು ರೂಪಾಣಿ 'ಕಾರ್ಯನಿರ್ವಹಿಸದ' ಮುಖ್ಯಮಂತ್ರಿಗಳು ಎಂದು ಸಂಬಂಧಪಟ್ಟ ರಾಜ್ಯಗಳ ಜನರಿಗೆ ತಿಂಗಳಿನಿಂದಲೇ ತಿಳಿದಿತ್ತು. ಇದೇ ರೀತಿಯಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸಬೇಕಾದವರ ಸಂಖ್ಯೆ ಹೆಚ್ಚಿದೆ. ಹರಿಯಾಣ, ಗೋವಾ, ತ್ರಿಪುರಾ ಹೀಗೆ ಈ ಪಟ್ಟಿ ಉದ್ದವಾಗಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT