ಶನಿವಾರ, ಮೇ 21, 2022
19 °C

ಉತ್ತರ ಪ್ರದೇಶದಲ್ಲಿ ಸಂಪುಟ ವಿಸ್ತರಣೆ ಮೂಲಕ ಬಿಜೆಪಿ ಜಾತಿ ಸಮೀಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಇನ್ನೇನು ಚುನಾವಣೆ ಎದುರಿಸಲಿರುವ ಉತ್ತರಪ್ರದೇಶದಲ್ಲಿ ಬಿಜೆಪಿಯು ಎಲ್ಲಾ ಜಾತಿಗಳ ಓಲೈಕೆಗೆ ಮುಂದಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಜಿತಿನ್ ಪ್ರಸಾದ ಅವರು ಬ್ರಾಹ್ಮಣ ಸಮುದಾಯವನ್ನು ಪ್ರತಿನಿಧಿಸುತ್ತಾರೆ. ಜಿತಿನ್ ಪ್ರಸಾದ ಅವರಿಗೆ ಸಂಪುಟ ದರ್ಜೆಯ ಸ್ಥಾನ ನೀಡಲಾಗಿದೆ. ಬ್ರಾಹ್ಮಣರನ್ನು ಓಲೈಸಲೆಂದೇ ಅವರಿಗೆ ಸ್ಥಾನ ನೀಡಲಾಗಿದೆ. ಪರಿಶಿಷ್ಟ ಜಾತಿಗಳ ಮೂವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿಗಳ ಮೂರು ಬೇರೆ ಬೇರೆ ಸಮುದಾಯಗಳ ಓಲೈಕೆಗೆ ಬಿಜೆಪಿ ಮುಂದಾಗಿದೆ.

ಇತರೆ ಹಿಂದುಳಿದ ವರ್ಗಗಳ ನಾಲ್ವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಜಿತಿನ್ ಪ್ರಸಾದ್ ಅವರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ರಾಜ್ಯ ಸಚಿವರ ಸ್ಥಾನ ನೀಡಲಾಗಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಜಾಟ್ ಸಮುದಾಯದ ದೊಡ್ಡ ಬೆಂಬಲವಿತ್ತು. ಆದರೆ ಈಗ ನೂತನ ಕೃಷಿ ಕಾಯ್ದೆಗಳ ಕಾರಣದಿಂದ ಜಾಟ್ ಸಮುದಾಯವು ಬಿಜೆಪಿಯಿಂದ ದೂರ ಸರಿದಿದೆ. ಕೃಷಿಯೇ ಪ್ರಧಾನ ಕಸುಬಾದ ಈ ಸಮುದಾಯದ ಬಹುತೇಕ ಮಂದಿ ರೈತ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಇದು ಬಿಜೆಪಿಗೆ ಮುಳುವಾಗಬಹುದು. ಈ ಸಂಭಾವ್ಯ ನಷ್ಟವನ್ನು ಸರಿದೂಗಿಸಿಕೊಳ್ಳುವ ಉದ್ದೇಶದಿಂದ ಬಿಜೆಪಿ ಬೇರೆ ಜಾತಿಗಳ ಓಲೈಕೆಗೆ ಮುಂದಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು