ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಾ’ ಪಂಚಾಯ್ತಿ ಚುನಾವಣೆ: ಬಿಜೆಪಿಗೆ ಹೆಚ್ಚುಸ್ಥಾನ– ಅಲ್ಲಗಳೆದ ಕಾಂಗ್ರೆಸ್

Last Updated 20 ಡಿಸೆಂಬರ್ 2022, 15:51 IST
ಅಕ್ಷರ ಗಾತ್ರ

ನಾಗ್ಪುರ/ಮುಂಬೈ: ಮಹಾರಾಷ್ಟ್ರದಲ್ಲಿ ಈಚೆಗೆ ನಡೆದ ಗ್ರಾಮ ಪಂಚಾಯ್ತಿಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸೇರಿದಂತೆ ಶಿವಸೇನಾ (ಉದ್ಧವ್ ಮತ್ತು ಶಿಂದೆ ಬಣ), ಕಾಂಗ್ರೆಸ್, ಎನ್‌ಸಿಪಿ ಮತ್ತಿತರ ಪಕ್ಷಗಳು ತಮ್ಮ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚು ಸ್ಥಾನ ಪಡೆದಿದ್ದಾರೆ ಎಂದು ಪ್ರತ್ಯೇಕವಾಗಿ ಹೇಳಿಕೊಂಡಿವೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸ್ಥಾನ ಗಳಿಸಿದ್ದಾರೆ ಎಂಬರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ ಹೇಳಿಕೆಯನ್ನು ಕಾಂಗ್ರೆಸ್ ಅಲ್ಲಗಳೆದಿದ್ದು, ಬಿಜೆಪಿ ಸುಳ್ಳು ಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದೆ.

ಆದರೆ, ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು, ಒಟ್ಟು 65,996 ಸದಸ್ಯರ ಆಯ್ಕೆಗಾಗಿ 7,682 ಗ್ರಾಮ ಪಂಚಾಯಿತಿಗಳಿಗೆ ಡಿ. 18ರಂದು ಮತದಾನ ನಡೆದಿದೆ. 699 ಗ್ರಾಮ ಪಂಚಾಯ್ತಿಗಳಲ್ಲಿ 14,028 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿಹ್ನೆಯಡಿ ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲವಾದ್ದರಿಂದಯಾವುದೇ ನಿರ್ದಿಷ್ಟ ಪಕ್ಷವು ಗೆದ್ದ ಗ್ರಾಮಗಳು ಅಥವಾ ಸ್ಥಾನಗಳ ಸಂಖ್ಯೆಯನ್ನು ಸೂಚಿಸುವ ಅಂಕಿ ಅಂಶವನ್ನು ಆಯೋಗವು ಒದಗಿಸುವುದಿಲ್ಲ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT