ಸೋಮವಾರ, ಅಕ್ಟೋಬರ್ 18, 2021
24 °C

ಭವಾನಿಪುರದಲ್ಲಿ ‘ಹೊರಗಿನ’ ಮತದಾರ: ಪ್ರಶಾಂತ್ ಕಿಶೋರ್ ಬಗ್ಗೆ ಬಿಜೆಪಿ ವ್ಯಂಗ್ಯ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಚುನಾವಣಾ ಸಲಹೆಗಾರ ಪ್ರಶಾಂತ್ ಕಿಶೋರ್ ಹೆಸರು ಭವಾನಿಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ ಎಂದು ಬಿಜೆಪಿ ಹೇಳಿದೆ.

ಪ್ರಶಾಂತ್ ಕಿಶೋರ್ ಅವರನ್ನು ಭವಾನಿಪುರ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಿದ ‘ಹೊರಗಿನವರು’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಭವಾನಿಪುರದಲ್ಲಿ ಸೆಪ್ಟೆಂಬರ್ 30ರಂದು ಉಪಚುನಾವಣೆ ನಡೆಯಲಿದೆ. ಟಿಎಂಸಿಯಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಸ್ಪರ್ಧಿಸುತ್ತಿದ್ದಾರೆ.

ಓದಿ: 

‘ಅಂತಿಮವಾಗಿ ಪ್ರಶಾಂತ್ ಕಿಶೋರ್ ಅವರು ಭವಾನಿಪುರದ ಮತದಾರರಾಗಿದ್ದಾರೆ. ಬಂಗಾಳದ ಮಗಳಿಗೆ ಈಗ ಹೊರಗಿನ ಮತದಾರನ ಅಗತ್ಯವಿದೆಯೇ? ರಾಜ್ಯದ ಜನ ತಿಳಿಯಲು ಬಯಸಿದ್ದಾರೆ’ ಎಂದು ಬಿಜೆಪಿಯ ಮಾಧ್ಯಮ ಘಟಕದ ಉಸ್ತುವಾರಿ ಸಪ್ತರ್ಷಿ ಚೌಧರಿ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ನಲ್ಲಿ ಮಮತಾ ಬ್ಯಾನರ್ಜಿ, ಟಿಎಂಸಿ ಮತ್ತು ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರನ್ನು ಟ್ಯಾಗ್ ಮಾಡಲಾಗಿದೆ.

ಭವಾನಿಪುರ ಉಪಚುನಾವಣೆಗೆ ಹೊರಗಿನಿಂದ ಬಂದ ಬಿಜೆಪಿ ನಾಯಕರು ಪ್ರಚಾರ ನಡೆಸುತ್ತಿದ್ದಾರೆ ಎಂದು ಫಿರ್ಹಾದ್ ಹಕೀಮ್‌ ಸೇರಿ ಕೆಲವು ಟಿಎಂಸಿ ನಾಯಕರು ಹೇಳಿದ್ದರು.

ಟಿಎಂಸಿಯ ಚುನಾವಣಾ ಸಲಹೆಗಾರರಾಗಿರುವ ಕಿಶೋರ್, ಭವಾನಿಪುರ ಚುನಾವಣೆ ಘೋಷಣೆಯಾದ ಬಳಿಕ ಸಾರ್ವಜನಿಕವಾಗಿ ಪಕ್ಷದ ಪ್ರಚಾರಾಭಿಯಾನಗಳಲ್ಲಿ ಕಾಣಿಸಿಕೊಂಡಿಲ್ಲ. ಆದರೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಜತೆ ಇತ್ತೀಚೆಗೆ ದೆಹಲಿಯಲ್ಲಿ ಸಭೆ ನಡೆಸಿದ್ದರು.

ಓದಿ: 

ಆದರೆ ಚುನಾವಣಾ ಆಯೋಗದ ವೆಬ್‌ಸೈಟ್ ಮಾಹಿತಿ ಪ್ರಕಾರ ಭವಾನಿಪುರದಲ್ಲಿ ಉಪಚುನಾವಣೆ ಘೋಷಣೆಯಾಗುವುದಕ್ಕೂ ಹಲವು ಸಮಯ ಮೊದಲೇ, ಜನವರಿ–ಏಪ್ರಿಲ್ ಅವಧಿಯಲ್ಲೇ ಪ್ರಶಾಂತ್ ಕಿಶೋರ್ ಅನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು