ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UP Election: ಬೂತ್ ಮಟ್ಟದಲ್ಲಿ 10 ಲಕ್ಷ ಕಾರ್ಯಕರ್ತರ ನಿಯೋಜಿಸಿದ ಬಿಜೆಪಿ

Last Updated 30 ಜನವರಿ 2022, 6:29 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಬೂತ್ ಮಟ್ಟದಲ್ಲಿ 10 ಲಕ್ಷ ಕಾರ್ಯಕರ್ತರನ್ನು ನಿಯೋಜಿಸಿದೆ. ಚುನಾವಣಾ ಪ್ರಚಾರಕ್ಕಾಗಿ ಇವರಿಗೆಲ್ಲ ಸ್ಮಾರ್ಟ್‌ಫೋನ್‌ಗಳನ್ನು ನೀಡಲಾಗಿದೆ.

ಸ್ಮಾರ್ಟ್‌ಫೋನ್‌ ಸಹಿತ ಐದರಿಂದ ಆರು ಮಂದಿ ಕಾರ್ಯಕರ್ತರನ್ನು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ನಿಯೋಜಿಸಲಾಗಿದೆ. ಬ್ಲಾಕ್ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಾಮಾಜಿಕ ಮಾಧ್ಯಮ ತಂಡಗಳನ್ನು ನಿಯೋಜಿಸಲಾಗಿದೆ. ಸ್ಮಾರ್ಟ್ ಫೋನ್ ಹೊಂದಿರುವ 10 ಲಕ್ಷ ಕಾರ್ಯಕರ್ತರು ಅವರವರ ವ್ಯಾಪ್ತಿಯಲ್ಲಿ ಪ್ರತಿಯೊಬ್ಬ ಮತದಾರನನ್ನು ತಲುಪಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರತಿಯೊಂದು ಮತದಾನ ಕೇಂದ್ರದ ವ್ಯಾಪ್ತಿಯಲ್ಲಿಯೂ 21 ಮಂದಿ ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ಇದರಲ್ಲಿ ಕನಿಷ್ಠ ಐವರು ಸ್ಮಾರ್ಟ್‌ಫೋನ್ ಹೊಂದಿದ್ದಾರೆ. ತಳಮಟ್ಟದಲ್ಲಿ ಮತದಾರರಿಗೆ ಮಾಹಿತಿ ತಲುಪಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.

ರಾಜ್ಯದಲ್ಲಿ 1,74,351 ಮತಗಟ್ಟೆಗಳಿವೆ. ಇದು 2017ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಶೇ 18.49ರಷ್ಟು ಹೆಚ್ಚಾಗಿದೆ.

ಪ್ರತಿಯೊಂದು ಮತಗಟ್ಟೆಯಲ್ಲಿ ಐದರಿಂದ ಆರು ಮಂದಿ ಸ್ವಯಂ ಸೇವಕರ ತಂಡವನ್ನು ರಚಿಸಿದ್ದೇವೆ. ನಮ್ಮ ಸ್ವಯಂಸೇವಕರು ಡಿಜಿಟಲ್ ಮಾಧ್ಯಮದ ಮೂಲಕ ಪ್ರತಿಯೊಂದು ಮತಗಟ್ಟೆಯ ವ್ಯಾಪ್ತಿಯ ಪ್ರತಿಯೊಬ್ಬ ಮತದಾರರನ್ನು ತಲುಪಲಿದ್ದಾರೆ. ಈ ಸ್ವಯಂಸೇವಕರು ಮತದಾರರ ಪಟ್ಟಿ ಹೊಂದಿರುವವರ ಜೊತೆ ಸಮನ್ವಯ ಸಾಧಿಸಿ ಕೆಲಸ ಮಾಡಲಿದ್ದಾರೆ ಎಂದು ಪಕ್ಷದ ಮತ್ತೊಬ್ಬ ನಾಯಕ ತಿಳಿಸಿದ್ದಾರೆ.

ಕೋವಿಡ್–19 ಸಾಂಕ್ರಾಮಿಕ ಕಾರಣ ಭಾರತೀಯ ಚುನಾವಣಾ ಆಯೋಗವು ಜನವರಿ 31ರವರೆಗೆ ಚುನಾವಣಾ ರ್‍ಯಾಲಿಗಳು ಮತ್ತು ರೋಡ್ ಶೋಗಳನ್ನು ನಿಷೇಧಿಸಿದೆ. ಆದರೆ, ಮೊದಲ ಮತ್ತು ಎರಡನೇ ಹಂತದ ಚುನಾವಣೆ ಪ್ರಚಾರಕ್ಕೆ ಕೆಲವು ವಿನಾಯಿತಿಗಳನ್ನೂ ನೀಡಿದೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆಬ್ರುವರಿ 10ರಂದು ಆರಂಭವಾಗಿ ಮಾರ್ಚ್ 7ರ ವರೆಗೆ ಹಂತಗಳಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT