ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ | ಪ್ರಚಾರ ಕಣದಲ್ಲಿ ಮೋದಿ, ಶಾ; ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ

Last Updated 8 ಫೆಬ್ರುವರಿ 2022, 3:20 IST
ಅಕ್ಷರ ಗಾತ್ರ

ಪಣಜಿ: ಗೋವಾ ವಿಧಾನಸಭೆ ಚುನಾವಣೆಗೆ ವಾರದ ಅಂತರವಷ್ಟೇ ಇದ್ದು, ಆಡಳಿತಾರೂಢ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಪ್ರಮುಖ ನಾಯಕರನ್ನು ಪ್ರಚಾರಕ್ಕೆ ಕರೆತರುತ್ತಿದೆ. ನಾಯಕರು ಗೋವಾದಲ್ಲಿ ಪ್ರಚಾರ ರ್‍ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ.

40 ಸ್ಥಾನಗಳ ಗೋವಾ ವಿಧಾನಸಭೆಗೆ ಫೆಬ್ರುವರಿ 14ರಂದು ಮತದಾನ ನಿಗದಿಯಾಗಿದೆ. ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಮೋದಿ, ಅಮಿತ್‌ ಶಾ ಅವರೊಂದಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ ಹಾಗೂ ರಾಜ್‌ನಾಥ್‌ ಸಿಂಗ್‌ ಸೇರಿದಂತೆ ಹಲವು ಮುಖಂಡರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಗೋವಾ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸದಾನಂದ ಶೇಟ್‌ ತಾನಾವಡೆ, 'ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಅವರು ಫೆಬ್ರುವರಿ 10ರಂದು ಮಾಪುಸಾದಲ್ಲಿ ಬೃಹತ್‌ ರ್‍ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ಕೇಂದ್ರ ಮತ್ತು ರಾಜ್ಯದ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಸೇರಲಿದ್ದಾರೆ. ಪಕ್ಷದ ಚುನಾವಣಾ ಉಸ್ತುವಾರಿ ದೇವೇಂದ್ರ ಫಡಣವಿಸ್‌ ಹಾಗೂ ಜಿ.ಕಿಶನ್‌ ರೆಡ್ಡಿ, ದರ್ಶನಾ ಜಾರ್ದೋಶ್, ಸಿ.ಟಿ.ರವಿ ಅವರ ನೇತೃತ್ವದಲ್ಲಿ ಚುನಾವಣೆ ಪ್ರಚಾರ ನಡೆಯುತ್ತಿದೆ.

ಪಣಜಿಯಲ್ಲಿ ಇಂದು ನಿತಿನ್‌ ಗಡ್ಕರಿ ಅವರು ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಅನಂತರ ಫಟೋರ್ಡೊ ಮತ್ತು ನವೆಲಿಂನಲ್ಲಿ ರ್‍ಯಾಲಿಗಳಲ್ಲಿ ಮಾತನಾಡಲಿದ್ದಾರೆ. ಫೆಬ್ರುವರಿ 9ರಂದು ಅಮಿತ್‌ ಶಾ ಅವರು ಮನೆ ಮನೆ ಪ್ರಚಾರ ಹಾಗೂ ಬಿಲೋಚಿಮ್‌ ಮತ್ತು ಸಂಖಲಿಮ್‌ನಲ್ಲಿ ರ್‍ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ. ರಾಜನಾಥ್‌ ಸಿಂಗ್‌ ಅವರು ಪೊಣ್ಡಾ ಮತ್ತು ವಾಸ್ಕೊದಲ್ಲಿ ಚುನಾವಣಾ ಸಭೆಗಳನ್ನು ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT