ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಮಕ್ಕಳ ಸುರಕ್ಷತೆ, ರಕ್ಷಣೆಯಲ್ಲಿ ಮಮತಾ ಸರ್ಕಾರ ವಿಫಲ: ಬಿಜೆಪಿ ವಾಗ್ದಾಳಿ

ಸಂತ್ರಸ್ತೆಯ ಕುಟುಂಬ ಭೇಟಿ ವೇಳೆ ಬಿಜೆಪಿ ಸತ್ಯ ಶೋಧನಾ ತಂಡ ವಾಗ್ದಾಳಿ
Last Updated 15 ಏಪ್ರಿಲ್ 2022, 13:34 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಇತ್ತೀಚೆಗೆ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಮೃತಪಟ್ಟಅಪ್ರಾಪ್ತ ಬಾಲಕಿಯ ಕುಟುಂಬ ಸದಸ್ಯರನ್ನು ಬಿಜೆಪಿಯ 'ಸತ್ಯ ಪರಿಶೋಧನಾ' ತಂಡ ಶುಕ್ರವಾರ ಭೇಟಿ ಮಾಡಿದೆ.

ಈ ವೇಳೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಸಾಮೂಹಿಕ ಅತ್ಯಾಚಾರಕ್ಕೀಡಾದ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದಬಿಜೆಪಿಯ ಸತ್ಯ ಶೋಧನಾ ತಂಡದ ಸದಸ್ಯರು, ಈ ಘಟನೆಯ ವಾಸ್ತವಾಂಶಗಳನ್ನು ಕಲೆ ಹಾಕಿದ್ದಾರೆ. ಈ ಕುರಿತಾದ ಮಾಹಿತಿಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಸಲ್ಲಿಸಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಈ ತಂಡವು, 'ಪಶ್ಚಿಮ ಬಂಗಾಳದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಪದಗಳಿಗೆ ನಿಲುಕದ್ದಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ, ಕೊಂದು ಹಾಕಲಾಗಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಮತ್ತು ರಕ್ಷಣೆ ಇಲ್ಲ ಎಂಬುದನ್ನು ಈ ಘಟನೆ ಸಾಬೀತುಪಡಿಸಿದೆ. ಇದು ನಾಚಿಕೆಗೇಡಿನ ಸಂಗತಿ' ಎಂದು ಅಸಮಾಧಾನ ವ್ಯಕ್ತಪಡಿಸಿತು.

ಈ ತಂಡದಲ್ಲಿ ಬಿಜೆಪಿ ನಾಯಕಿ ಖುಷ್ಬು ಸುಂದರ್, ಬಿಜೆಪಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಸೇರಿದಂತೆ ಇತರರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT