ಪಂಜಾಬ್ ಚುನಾವಣೆ: ಬಿಜೆಪಿ ಜೊತೆ ಅಮರಿಂದರ್ ಮೈತ್ರಿ; ಅಧಿಕೃತ ಘೋಷಣೆ

ನವದೆಹಲಿ: ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ 'ಪಂಜಾಬ್ ಲೋಕ ಕಾಂಗ್ರೆಸ್' ಹಾಗೂ ಸುಖದೇವ್ ಸಿಂಗ್ ದಿಂಡ್ಸಾ ಅವರ ಶಿರೋಮಣಿ ಅಕಾಲಿ ದಳ (ಸಂಯುಕ್ತ) ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಬಿಜೆಪಿ ಅಧಿಕೃತವಾಗಿ ಘೋಷಿಸಿದೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೋಮವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಇದನ್ನೂ ಓದಿ: ರಾತ್ರಿ ಕರ್ಫ್ಯೂ, ಹಗಲು ಚುನಾವಣಾ ರ್ಯಾಲಿ; ಬಿಜೆಪಿ ವಿರುದ್ಧ ವರುಣ್ ಗಾಂಧಿ ಟೀಕೆ
Met with Union HM @AmitShah, @BJP4India President @JPNadda, Punjab Incharge @gssjodhpur & Shiromani Akali Dal (Sanyukt) President Sukhdev Dhindsa to discuss details of the alliance for the upcoming assembly elections. Look forward to working together to give Punjab a stable govt. pic.twitter.com/Wfvod6CTDo
— Capt.Amarinder Singh (@capt_amarinder) December 27, 2021
ಈ ಕುರಿತು ಟ್ವೀಟ್ ಮಾಡಿರುವ ಅಮರಿಂದರ್ ಸಿಂಗ್, 'ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಕುರಿತಾಗಿ ಮಾತುಕತೆ ನಡೆಸಲಾಯಿತು. ಪಂಜಾಬ್ನಲ್ಲಿ ಸ್ಥಿರ ಸರ್ಕಾರ ನೀಡುವ ಗುರಿ ಹೊಂದಿದ್ದೇವೆ' ಎಂದು ಹೇಳಿದ್ದಾರೆ.
ಕಾಂಗ್ರೆಸ್ ಜೊತೆಗಿನ ಭಿನ್ನಮತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಮರಿಂದರ್ ಸಿಂಗ್ ಪಕ್ಷವನ್ನು ತೊರೆದಿದ್ದರು. ಬಳಿಕ ಹೊಸತಾದ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ರೂಪಿಸಿದ್ದರು.
ಈ ಮೂರು ಪಕ್ಷಗಳು ಜಂಟಿಯಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.