ಸೋಮವಾರ, ಮೇ 23, 2022
30 °C

ಮುಂದಿನ ವರ್ಷದ ಮಾರ್ಚ್ ವೇಳೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ: ಕೇಂದ್ರ ಸಚಿವ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಜೈಪುರ: ಮುಂದಿನ ವರ್ಷದ ಮಾರ್ಚ್‌ ವೇಳೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ತಿಳಿಸಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿರುವ ಅವರು, ‘ಮಾರ್ಚ್‌ ವೇಳೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯು ಸರ್ಕಾರ ರಚಿಸಲಿದೆ. ಬದಲಾವಣೆಯನ್ನು ನೀವು ನೋಡುತ್ತೀರಿ‘ ಎಂದು ಹೇಳಿದ್ದಾರೆ.

‘ಸರ್ಕಾರವೊಂದನ್ನು ರಚಿಸಲು, ಸರ್ಕಾರವೊಂದನ್ನು ಕೆಡವಲು ಕೆಲವು ರಹಸ್ಯ ಸಂಗತಿಗಳಿರುತ್ತವೆ. ಅವುಗಳ ಕುರಿತು ಸಾರ್ವಜನಿಕವಾಗಿ ಮಾತನಾಡಲು ಸಾಧ್ಯವಿಲ್ಲ‘ ಎಂದೂ ರಾಣೆ ತಿಳಿಸಿದ್ದಾರೆ.

‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕೆನ್ನೆಗೆ ಬಾರಿಸುತ್ತೇನೆ’ ಎಂದು ಹೇಳಿಕೆ ನೀಡಿದ್ದ ರಾಣೆ ಅವರನ್ನು ಆಗಸ್ಟ್ ತಿಂಗಳಲ್ಲಿ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಇದು ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಣ ನೇರ ರಾಜಕೀಯ ಹಣಾಹಣಿಗೆ ಕಾರಣವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು