ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಎಂದಿಗೂ ನಿಷೇಧ ಹೇರಿಲ್ಲ: ರಾಜನಾಥ್

Last Updated 15 ಜನವರಿ 2023, 9:33 IST
ಅಕ್ಷರ ಗಾತ್ರ

ನವದೆಹಲಿ: ಮಾಧ್ಯಮ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಯಾವತ್ತೂ ನಿಷೇಧ ಹೇರಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ರಾಜನಾಥ್, ಯಾವುದೇ ಮಾಧ್ಯಮ ಸಂಸ್ಥೆಯ ಸ್ವಾತಂತ್ರ್ಯ ಅಥವಾ ಹಕ್ಕಿಗೆ ಧಕ್ಕೆ ತಂದಿಲ್ಲ ಎಂದು ಹೇಳಿದರು.

ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಥವಾ ನರೇಂದ್ರ ಮೋದಿ ಅವರ ಸರ್ಕಾರವಾಗಲಿ ಮಾಧ್ಯಮ ಸಂಸ್ಥೆಗಳ ಮೇಲೆ ಎಂದಿಗೂ ನಿಷೇಧವನ್ನು ಹೇರಿಲ್ಲ ಎಂಬುದನ್ನು ಮಾಧ್ಯಮ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸುತ್ತಿರುವವರು ಮರೆತುಬಿಡುತ್ತಾರೆ ಎಂದು ಹೇಳಿದರು.

ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲು, ಕಾಂಗ್ರೆಸ್ ಸರ್ಕಾರವೇ ಸಂವಿಧಾನಕ್ಕೆ ತಿದ್ದುಪಡಿ ತಂದಿದೆ. ಗಾಜಿನ ಮನೆಯಲ್ಲಿ ವಾಸಿಸುವವರು ಇತರರ ಮೇಲೆ ಕಲ್ಲು ಎಸೆಯಬಾರದು ಎಂದು ಹೇಳಿದರು.

ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂದು ಉಲ್ಲೇಖ ಮಾಡಿರುವ ಸಿಂಗ್, ಬಲಿಷ್ಠ ಪ್ರಜಾಪ್ರಭುತ್ವ ರೂಪುಗೊಳ್ಳಲು ಮಾಧ್ಯಮ ಸ್ವಾತಂತ್ರ್ಯವು ಅತ್ಯಗತ್ಯ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT