ಮಂಗಳವಾರ, ಜನವರಿ 31, 2023
18 °C

ಕಾಶ್ಮೀರಿ ಪಂಡಿತರನ್ನು ಕಾಪಾಡುವಲ್ಲಿ ಬಿಜೆಪಿ ವಿಫಲ: ಮೆಹಬೂಬಾ ಮುಫ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಕಾಶ್ಮೀರದಲ್ಲಿರುವ ಅಲ್ಪಸಂಖ್ಯಾತ ಸಮುದಾಯವನ್ನು ರಕ್ಷಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಅಲ್ಲದೇ ಕಾಶ್ಮೀರಿ ಪಂಡಿತರ ನೋವು, ಸಂಕಟವನ್ನು ಬಿಜೆ‍ಪಿ ತನ್ನ ಅನುಕೂಲಕ್ಕೆ ಬಳಸಿಕೊಳ್ಳುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮಂಗಳವಾರ ಆರೋಪಿಸಿದ್ದಾರೆ.

ಅನಂತನಾಗ್ ಜಿಲ್ಲೆಯ ಖಾಜಿಗುಂಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರಿ ಪಂಡಿತ ಉದ್ಯೋಗಿಗಳ ಪಟ್ಟಿ ಸೋರಿಕೆಯಾಗಿರುವುದು ದುರದೃಷ್ಟಕರ. ಕೇಂದ್ರದಲ್ಲಿ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಆಡಳಿತವಿದ್ದರೂ ಕಾಶ್ಮೀರಿ ಪಂಡಿತರ ಸಮಸ್ಯೆ ಬಗೆಹರಿದಿಲ್ಲ. ಒಂದು ಕಡೆ ಕಾಶ್ಮೀರಿ ಪಂಡಿತರಿಗೆ ಕೆಲಸಕ್ಕೆ ಹಾಜರಾಗುವಂತೆ ಕೇಳುತ್ತಿದ್ದರೆ, ಮತ್ತೊಂದೆಡೆ ಅವರ ವಿವರ ಸೋರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ, ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಬ್ಲಾಗ್‌ನಲ್ಲಿ ಪ್ರಧಾನ ಮಂತ್ರಿಗಳ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ತೊಡಗಿಸಿಕೊಂಡಿರುವ 56 ಕಾಶ್ಮೀರಿ ಪಂಡಿತ ಉದ್ಯೋಗಿಗಳ ಪಟ್ಟಿಯನ್ನು ಪ್ರಕಟಿಸಲಾಯಿತು ಮತ್ತು ಅವರ ಮೇಲೆ ಹೆಚ್ಚುತ್ತಿರುವ ದಾಳಿಯ ಎಚ್ಚರಿಕೆಯನ್ನು ನೀಡಲಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿರುವ ಪಟ್ಟಿ ಅಧಿಕೃತವಾಗಿಲ್ಲ. ಪಟ್ಟಿ ಪ್ರಕಟಿಸಿರುವುದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು