ಬುಧವಾರ, ಆಗಸ್ಟ್ 17, 2022
25 °C

ರೈತರನ್ನು ಕಡೆಗಣಿಸಿದ ಬಿಜೆಪಿ ಸರ್ಕಾರ: ಅಖಿಲೇಶ್ ಯಾದವ್ ವಾಗ್ದಾಳಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಲಕ್ನೋ: ಬಿಜೆಪಿ ಸರ್ಕಾರ ರೈತರನ್ನು ಕಡೆಗಣಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌ ಶುಕ್ರವಾರ ಆರೋಪಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, 'ಇಂತಹ ಚಳಿಯಲ್ಲಿ ರಸ್ತೆಗಿಳಿದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಸಮರ್ಥನೀಯ ಬೇಡಿಕೆಗಳ ಬಗ್ಗೆ ಹೃದಯಹೀನ ಮನೋಭಾವವನ್ನು ಅಳವಡಿಸಿಕೊಳ್ಳುವ ಮೂಲಕ ಬಿಜೆಪಿ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿದೆ' ಎಂದು ಹರಿಹಾಯ್ದಿದ್ದಾರೆ.

ರೈತರ ಪ್ರತಿಭಟನೆಯ ಬಗ್ಗೆ ವಿಶ್ವದಾದ್ಯಂತ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇದು ಭಾರತದ ಪ್ರಜಾಪ್ರಭುತ್ವದ ಹೆಸರಿಗೆ ಧಕ್ಕೆ ತಂದಿದೆ ಎಂದು ಅಖಿಲೇಶ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮಗೆ ಆಹಾರ ನೀಡುವವರ ಮೇಲಿನ ಶೋಷಣೆಯನ್ನು ಬಿಜೆಪಿ ಸರ್ಕಾರ ನಿಲ್ಲಿಸಲಿ. ರೈತರ ಪ್ರತಿಭಟನೆಯು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮರಳಿ ಸ್ಥಾಪಿಸುವ ಚಳುವಳಿಯಾಗಿದೆ ಎಂದು ಅಖಿಲೇಶ್‌ ಹೇಳಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಖಿಲೇಶ್‌ ಯಾದವ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು