ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಸೃಷ್ಟಿಸುವಲ್ಲಿ ಬಿಜೆಪಿ ಸರ್ಕಾರ ವಿಫಲ: ಅಖಿಲೇಶ್‌ ಯಾದವ್‌

Last Updated 10 ಏಪ್ರಿಲ್ 2022, 14:40 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಭಾನುವಾರ ಸರ್ಕಾರವನ್ನು ಟೀಕಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ, ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವಲ್ಲಿ ಸರ್ಕಾರ ವೈಪಲ್ಯ ಅನುಭವಿಸಿದೆ. ಲಕ್ಷಾಂತರ ಜನರು ವಿವಿಧ ಸಮಸ್ಯೆಗಳಿಂದ ನರಳುತ್ತಿದ್ದಾರೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಜಿಸಲು ಸರ್ಕಾರದಿಂದ ಸಾಧ್ಯವಾಗಿಲ್ಲ ಎಂದು ಅವರು ಹರಿಹಾಯ್ದಿದ್ದಾರೆ.

ಯುವಕರು ಸರ್ಕಾರದ ನಡೆಯನ್ನು ಪ್ರಶ್ನೆ ಮಾಡಿದರೆ, ಅವರ ಧ್ವನಿಯನ್ನು ಪೊಲೀಸರು ಅಡಗಿಸುತ್ತಿದ್ದಾರೆ ಎಂದು ಅಖಿಲೇಶ್‌ ಆರೋಪಿಸಿದ್ದಾರೆ. ನಿರುದ್ಯೋಗದಿಂದ ಬಳಲುತ್ತಿರುವ ಯುವಕರ ಗೋಳನ್ನು ಈ ಸರ್ಕಾರ ಕೇಳುತ್ತಿಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಉದ್ಯೋಗ ಜಾಹೀರಾತು ನೀಡುತ್ತಿತ್ತು. ಈಗ ಆ ಜಾಹೀರಾತುಗಳು ಬಂದ್ ಆಗಿವೆ. ಸರ್ಕಾರ ಸಮಾಜಮುಖಿಯಾಗಿ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT