ಗುಜರಾತ್ ಚುನಾವಣೆ: ಹಿಂದಿನ ಎಲ್ಲಾ ದಾಖಲೆ ಮುರಿದು ಬಿಜೆಪಿ ಅಧಿಕಾರಕ್ಕೆ –ಶಾ

ಅಹಮದಾಬಾದ್: ‘ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಈ ಬಾರಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದರು.
ಸನಂದ್ ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಕನುಭಾಯ್ ಪಟೇಲ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಹಾಜರಿದ್ದ ಅಮಿತ್ ಶಾ, ‘ದಾಖಲೆ ಸಂಖ್ಯೆಯಲ್ಲಿ ಮತಗಳನ್ನು ಪಡೆದು ಹಿಂದೆಂದಿಗಿಂತಲೂ ಹೆಚ್ಚಿನ ಸೀಟುಗಳನ್ನು ಈ ಬಾರಿ ಗೆಲ್ಲಲಿದ್ದೇವೆ’ ಎಂದರು.
‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ರಾಜ್ಯದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸಿದ್ದಾರೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.