ಲಖನೌ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೊರಗಿನವರು. ಅವರಿಗೆ ರಾಜ್ಯದ ಬಗ್ಗೆ ಬಹಳ ಕಡಿಮೆ ತಿಳಿವಳಿಕೆ ಇದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕಿಸಿದ್ದಾರೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ‘ಆದಿತ್ಯನಾಥ ಅವರು ಉತ್ತರ ಪ್ರದೇಶದ ಜನರಿಗೆ ತಮ್ಮ ತಾಯ್ನಾಡಿನ ಬಗ್ಗೆ ಮಾಹಿತಿ ನೀಡಬೇಕು. ಆದಿತ್ಯನಾಥ ಅವರು ಸಂತರಾಗುವ ಮೊದಲು ಅವರ ಹೆಸರು ಅಜಯ್ ಬಿಶ್ತ್ ಎಂದಾಗಿತ್ತು. ಅವರು ಉತ್ತರಾಖಂಡದಿಂದ ಬಂದವರು. ಬಿಜೆಪಿಯು ಹೊರಗಿನವರನ್ನು ರಾಜ್ಯದ ಜನತೆಯ ಮೇಲೆ ಹೇರಿಕೆ ಮಾಡಿದೆ’ ಎಂದು ಹೇಳಿದ್ದಾರೆ.

ಓದಿ:ಕೋವಿಡ್ ವಿಪತ್ತಿನಲ್ಲೂ ರಾಮ ಮಂದಿರಕ್ಕಾಗಿ ಬಿಜೆಪಿಯಿಂದ ಚಂದಾ ವಸೂಲಿ: ಅಖಿಲೇಶ್

‘ಅವರಿಗೆ (ಯೋಗಿ) ಉತ್ತರ ಪ್ರದೇಶದ ಬಗ್ಗೆ ಹೆಚ್ಚು ಗೊತ್ತಿಲ್ಲ. ಆದ್ದರಿಂದ ಸಮಾಜವಾದಿ ಪಕ್ಷದ ಆಳ್ವಿಕೆ ಕಾಲದಲ್ಲಿ ಮಾಡಿದ ಕೆಲಸಗಳ ಶ್ರೇಯವನ್ನು ತಾವು ಪಡೆಯುತ್ತಿದ್ದಾರೆ’ ಎಂದು ಅಖಿಲೇಶ್ ದೂರಿದ್ದಾರೆ.

'ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಯಲ್ಲಿಯೂ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಅವರಿಗೆ ಶಿಕ್ಷೆ ನೀಡಲಿದ್ದಾರೆ' ಎಂದು ಅಖಿಲೇಶ್ ಹೇಳಿದ್ದಾರೆ.

ನೋಡಿ:Video - ಸತತ 12ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಬೆಂಗಳೂರಿನಲ್ಲೆಷ್ಟು?

ಬಿಜೆಪಿ ಸರ್ಕಾರವು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಹಾಗೂ ಅವರ ಕುಟುಂಬದವರನ್ನು ಅವಮಾನಿಸಿದೆ. ಅವರು ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್, ಬಿಎಸ್‌ಪಿ ಹಾಗೂ ಇತರ ಪಕ್ಷಗಳ ಕೆಲವು ನಾಯಕರೂ ಅಖಿಲೇಶ್‌ಗೆ ಸಾಥ್ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.