ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ವಜಾಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Last Updated 9 ಸೆಪ್ಟೆಂಬರ್ 2022, 10:15 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ವಜಾ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸದೆದುರು ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೊಳೆಗೇರಿ ನಿವಾಸಿಗಳು, ಆಟೋ ಚಾಲಕರು ಮತ್ತು ಹಿರಿಯ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅಬಕಾರಿ ಹಗರಣದ ಮೂಲಕ ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡು ಮದ್ಯ ಮಾಫಿಯಾಗೆ ಅನುಕೂಲ ಮಾಡಿಕೊಡಲು ಎಎಪಿ ಸರ್ಕಾರ ಯತ್ನಿಸಿರುವುದು ಬಹಿರಂಗಗೊಂಡಿದೆ ಎಂದು ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಆದೇಶ್ ಗುಪ್ತಾ ಮಥುರಾ ರಸ್ತೆಯ ಸಿಸೋಡಿಯಾ ಮನೆ ಎದುರು ಪ್ರತಿಭಟನೆ ವೇಳೆ ಆರೋಪಿಸಿದ್ದಾರೆ.

ಅಬಕಾರಿ ಹಗರಣ ಕುರಿತ ಪ್ರಶ್ನೆಗಳಿಗೆ ಉತ್ತರಿಸುವುದರಿಂದ ಕೇಜ್ರಿವಾಲ್‌ ತಪ್ಪಿಸಿಕೊಳ್ಳುತ್ತಿದ್ದಾರೆ. ಆದರೆ, ಅವರನ್ನು ವಜಾ ಮಾಡುವವರೆಗೆ ಬಿಜೆಪಿ ವಿರಮಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

ವಿಪಕ್ಷ ನಾಯಕ ರಾಮವೀರ್ ಸಿಂಗ್ ಬಿದೂರಿ ಮತ್ತು ಪ್ರಧಾನ ಕಾರ್ಯದರ್ಶಿ ದಿನೇಶ್ ಪ್ರತಾಪ್ ಸಿಂಗ್ ನೇತೃತ್ವದಲ್ಲಿ ಕೇಜ್ರಿವಾಲ್ ನಿವಾಸದೆದುರು ಪ್ರತಿಭಟನೆ ನಡೆಸಲಾಯಿತು.

ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲಪ್ರದೇಶ ಮತ್ತು ದಕ್ಷಿಣದ ರಾಜ್ಯಗಳಿಂದ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿ 2021–22ರಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ, ಎಫ್‌ಐಆರ್‌ನಲ್ಲಿ ಆರೋಪಿಯಾಗಿ ಮನೀಶ್ ಸಿಸೋಡಿಯಾ ಅವರ ಹೆಸರನ್ನು ಉಲ್ಲೇಖಿಸಿತ್ತು.

ಆದರೆ, ಈ ಆರೋಪಗಳನ್ನು ಸಿಎಂ ಕೇಜ್ರಿವಾಲ್ ಮತ್ತು ಡಿಸಿಎಂ ಸಿಸೋಡಿಯಾ ತಳ್ಳಿಹಾಕಿದ್ದಾರೆ.

2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಸ್ಪರ್ಧಿಯಾಗಿ ರೂಪುಗೊಳ್ಳುತ್ತಿರುವುದರಿಂದ ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT