ಸೋಮವಾರ, ಏಪ್ರಿಲ್ 12, 2021
23 °C

ಅಸ್ಸಾಂನಲ್ಲಿ ಸಮಾಜ ಒಡೆಯಲು ಬಿಜೆಪಿ ಯತ್ನ: ಕಾಂಗ್ರೆಸ್ ಆರೋಪ

ಪಿಟಿಐ‌ Updated:

ಅಕ್ಷರ ಗಾತ್ರ : | |

Congress PTI File photo

ಗುವಾಹಟಿ: ಅಸ್ಸಾಂನಲ್ಲಿ ಬಿಜೆಪಿಯ ಚುನಾವಣಾ ಪ್ರಚಾರವು ಸಂಪೂರ್ಣ ನಕಾರಾತ್ಮಕವಾಗಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜಿತೇಂದ್ರ ಸಿಂಗ್ ಟೀಕಿಸಿದ್ದಾರೆ.

ಅಸ್ಸಾಂನಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಳಸಿರುವ ಭಾಷೆ ಅಸ್ಸಾಂ ಸಮಾಜವನ್ನು ಒಡೆಯುವ ಉದ್ದೇಶದಿಂದ ಕೂಡಿದೆ ಎಂದು ಅವರು ಆರೋಪಿಸಿದ್ದಾರೆ.

ಓದಿ: 

ಅಸ್ಸಾಂನಲ್ಲಿ ಅಂತಿಮ ಹಂತದ ಮತದಾನ ಏಪ್ರಿಲ್ 6ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಅಭಿಯಾನ ಮುಕ್ತಾಯಕ್ಕೂ ಮುನ್ನ ಪ್ರತಿಪಕ್ಷಗಳ ಮೈತ್ರಿಕೂಟದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿಯು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ. ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮಾ ಅವರ ಪ್ರಚಾರದ ಮೇಲೆ ವಿಧಿಸಲಾಗಿದ್ದ ನಿರ್ಬಂಧದ ಅವಧಿಯನ್ನು ಕಡಿತಗೊಳಿಸಿರುವುದು ಮತ್ತು ಇಂತಹ ಕೆಲವು ಘಟನೆಗಳು ಚುನಾವಣಾ ಆಯೋಗವು ಕೇಸರಿ ಪಕ್ಷದ ಏಜೆಂಟರಂತೆ ವರ್ತಿಸುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಅವರು ಹೇಳಿದ್ದಾರೆ.

ಓದಿ: 

ಚುನಾವಣೆ ಸಮಯದಲ್ಲಿ ಮಾತ್ರ ಮೋದಿ ಮತ್ತು ಅಮಿತ್ ಶಾ ಅಸ್ಸಾಂಗೆ ಬರುತ್ತಾರೆ. ಇವರು ಅಸ್ಸಾಂ ಜನ ಪ್ರವಾಹದಿಂದ ಸಂಕಷ್ಟಕ್ಕೀಡಾಗಿದ್ದಾಗ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಚಳವಳಿಯಲ್ಲಿ ಅಸ್ಸಾಂ ಹೊತ್ತಿ ಉರಿಯುತ್ತಿದ್ದಾಗ ಎಲ್ಲಿದ್ದರು ಎಂದು ಜಿತೇಂದ್ರ ಸಿಂಗ್ ಪ್ರಶ್ನಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ವಿರುದ್ಧ ಪೈಪೋಟಿ ನೀಡಲು ಕಾಂಗ್ರೆಸ್ ಪಕ್ಷವು ಎಐಯುಡಿಎಫ್, ಬಿಪಿಎಫ್, ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್‌), ಎಜಿಎಂ, ಆರ್‌ಜೆಡಿ, ಎಎನ್‌ಪಿ, ಜಿಮೊಚಯಾನ್, ಜೆಪಿಪಿ ಜತೆ ಮೈತ್ರಿ ಮಾಡಿಕೊಂಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು