ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಹೇಳನಕಾರಿ ಹೇಳಿಕೆ: ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲು

Last Updated 29 ಮಾರ್ಚ್ 2023, 11:08 IST
ಅಕ್ಷರ ಗಾತ್ರ

ತಿರುವನಂತಪುರ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸ್‌ವಾದದ (ಸಿಪಿಐ–ಎಂ) ಮಹಿಳಾ ನಾಯಕಿಯರ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಿರುವ ಆರೋಪದ ಮೇಲೆ ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಿಪಿಐ (ಎಂ) ಪಕ್ಷದ ನಾಯಕಿ ಮತ್ತು ಮಾಜಿ ಸಂಸದೆ ಸಿ.ಎಸ್‌ ಸುಜಾತ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್‌ 354 (ಲೈಂಗಿಕ ಕಿರುಕುಳ) ಮತ್ತು ಸೆಕ್ಷನ್ 509 (ಮಹಿಳೆಯರ ನಮ್ರತೆಗೆ ಅವಮಾನ ಮಾಡುವ ಉದ್ದೇಶದಿಂದ ಪದ, ಸನ್ನೆ) ಅಡಿಯಲ್ಲಿ ಕಂಟೋನ್ಮೆಂಟ್ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಷನ್‌ 354 ಎ ಅಡಿಯಲ್ಲಿ ಆರೋಪ ಸಾಬೀತಾದರೆ ಆರೋಪಿಗೆ ಕನಿಷ್ಠ ಒಂದು ವರ್ಷ ಜೈಲು ಶಿಕ್ಷೆ ಮತ್ತು ಸೆಕ್ಷನ್‌ 509 ಅಡಿಯಲ್ಲಿ ಕನಿಷ್ಠ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಭಾನುವಾರ ತ್ರಿಶೂರ್‌ನಲ್ಲಿ ಆಯೋಜಿಸಿದ್ದ ಮಹಿಳಾ ಮೋರ್ಚಾ ಕಾರ್ಯಕ್ರಮದಲ್ಲಿ ಕೆ. ಸುರೇಂದ್ರನ್ ಅವರು ಸಿಪಿಐ (ಎಂ) ಮಹಿಳಾ ನಾಯಕಿ ವಿರುದ್ಧ ಬಾಡಿ ಶೇಮಿಂಗ್ ಮತ್ತು ಜನಾಂಗೀಯ ನಿಂದನೆಯನ್ನು ಒಳಗೊಂಡ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು, ವಿವಾದಕ್ಕೆ ಕಾರಣರಾಗಿದ್ದರು. ಸುರೇಂದ್ರನ್ ಹೇಳಿಕೆಯನ್ನು ವಿಪಕ್ಷಗಳು ಖಂಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT