ಶುಕ್ರವಾರ, ಸೆಪ್ಟೆಂಬರ್ 24, 2021
24 °C

ಜಮ್ಮು-ಕಾಶ್ಮೀರ: ಉಗ್ರರ ದಾಳಿ; ಬಿಜೆಪಿ ನಾಯಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಮ್‌ನಲ್ಲಿ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿ ವೇಳೆ ಬಿಜೆಪಿ ನಾಯಕರೊಬ್ಬರು ಮೃತಪಟ್ಟಿದ್ದಾರೆ. ವಾರದೊಳಗೆ ಎರಡನೇ ಬಾರಿಗೆ ಈ ರೀತಿಯ ಪ್ರಕರಣ ನಡೆದಿದೆ.

ಮೃತಪಟ್ಟವರನ್ನು ಜಾವೇದ್‌ ಅಹ್ಮದ್‌ ದರ್‌ ಎಂದು ಹೇಳಲಾಗಿದೆ. ಅವರು, ಹೊಂಶಲಿ ಬಾಗ್‌ ವಿಧಾನಸಭೆ ಕ್ಷೇತ್ರದ ಉಸ್ತುವಾರಿಯಾಗಿದ್ದರು.

ಕಾಶ್ಮೀರದಲ್ಲಿ ಬಿಜೆಪಿಯ ಮಾಧ್ಯಮ ವಿಭಾಗದ ವಕ್ತಾರ ಮನ್ಸೂರ್‌ ಅಹಮದ್‌ ಈ ಘಟನೆಯನ್ನು ಖಂಡಿಸಿದ್ದಾರೆ. ʼಭಯೋತ್ಪಾದಕರು ನಡೆಸಿದ ಅಮಾನವೀಯ ಮತ್ತು ಹೇಡಿ ಕೃತ್ಯ ಇದಾಗಿದೆ. ದರ್‌ ಅವರ ಕುಟುಂಬಕ್ಕೆ ತುಂಬಲಾರದ ನಷ್ಟ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆʼ ಎಂದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು