ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸುವೇಂದು ಅಧಿಕಾರಿ

Last Updated 9 ಜೂನ್ 2021, 8:11 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಹಾಗೂ ವಿಧಾನಸಭೆಯ ವಿರೋಧಪಕ್ಷದ ನಾಯಕ ಸುವೇಂದು ಅಧಿಕಾರಿ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಮಂಗಳವಾರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.‍ಪಿ. ನಡ್ಡಾ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿದ್ದ ಸುವೇಂದು ಅಧಿಕಾರಿಯವರು, ಇಂದು ಪ್ರಧಾನಿ ಮೋದಿವರನ್ನು ಅವರನ್ನು, ಇಲ್ಲಿನ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಪಶ್ಚಿಮ ಬಂಗಾಳ ಚುನಾವಣೆ ನಂತರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಸುವೇಂದು ಅಧಿಕಾರಿ ಅವರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಸಿಂಗೂರು ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅವರು ಸೋಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT