ಮಂಗಳವಾರ, ಜೂನ್ 15, 2021
27 °C

ಕಾಶ್ಮೀರ: ಬಿಜೆಪಿ ನಾಯಕನ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಉಗ್ರರು

ಪ್ರಜಾವಾಣಿ Updated:

ಅಕ್ಷರ ಗಾತ್ರ : | |

Representative Image. Credit: iStock Photo

ಶ್ರೀನಗರ: ದಕ್ಷಿಣ ಕಾಶ್ಮೀರದ ಟ್ರಾಲ್ ಪ್ರದೇಶದಲ್ಲಿ ಬುಧವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಜೆಪಿ ನಾಯಕ ರಾಕೇಶ್ ಪಂಡಿತ್ ಮೃತಪಟ್ಟಿದ್ದಾರೆ.

ಗುಂಡಿನ ದಾಳಿಗೆ ಒಳಗಾದ ರಾಕೇಶ್‌ರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ರಾಕೇಶ್ ಪಂಡಿತ್ ಅವರು ನೆರೆಮನೆಯ ಮುಶ್ತಾಖ್ ಅಹ್ಮದ್ ಮನೆಯ ಬಳಿ ಇದ್ದಾಗ ಉಗ್ರರು ಗುಂಡು ಹಾರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಶ್ತಾಖ್ ಪುತ್ರಿ ಅಸೀಫಾಳಿಗೂ ಗುಂಡು ತಗುಲಿ ಗಾಯಗೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಕೇಶ್ ಪಂಡಿತ್‌ಗೆ ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಗಳ ರಕ್ಷಣೆ ಒದಗಿಸಲಾಗಿತ್ತು. ಆದರೆ ಉಗ್ರರ ಗುಂಡಿನ ದಾಳಿ ನಡೆದ ಸಂದರ್ಭ ಅವರು ರಾಕೇಶ್ ಜತೆಗೆ ಇರಲಿಲ್ಲ ಎಂದು ವರದಿಗಳು ಹೇಳಿವೆ.

ಗುಂಡಿನ ದಾಳಿ ನಡೆದ ಬೆನ್ನಲ್ಲೇ ಭದ್ರತಾ ಪಡೆಗಳು ಉಗ್ರರಿಗಾಗಿ ಸುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು