ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯದಲ್ಲಿ ವೇಶ್ಯಾಗೃಹ ನಡೆಸುತ್ತಿದ್ದ ಬಿಜೆಪಿ ನಾಯಕ ಪರಾರಿ: ಪೊಲೀಸರಿಂದ ಶೋಧ

ಅಕ್ಷರ ಗಾತ್ರ

ಗುವಾಹಟಿ: ತಮ್ಮ ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ ವೇಶ್ಯಾಗೃಹ ನಡೆಸುತ್ತಿದ್ದ ಆರೋಪ ಹೊತ್ತಿರುವ ಬಿಜೆಪಿ ಮೇಘಾಲಯ ಘಟಕದ ಉಪಾಧ್ಯಕ್ಷ ಬರ್ನಾರ್ಡ್ ಎನ್. ಮಾರಕ್ ಅವರು ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮಾರಕ್ ಅವರ ಫಾರ್ಮ್‌ಹೌಸ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಓರ್ವ ಬಾಲಕಿ ಸಹಿತ ಆರು ಮಕ್ಕಳನ್ನು ರಕ್ಷಿಸಲಾಗಿತ್ತು. 73 ಜನರನ್ನು ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದರು.

ಆದರೆ ಶರಣಾಗಿ ತನಿಖೆಗೆ ಸಹಕರಿಸುವಂತೆ ಮಾರಕ್‌ಗೆ ಸೂಚಿಸಲಾಗಿತ್ತು. ಮಾರಕ್ ಅವರು ತಪ್ಪಿಸಿಕೊಂಡಿದ್ದು, ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ವೆಸ್ಟ್ ಗಾರೊ ಹಿಲ್ಸ್ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಸ್ಥಳೀಯರು ಪೊಲೀಸರಿಗೆ ಮೌಖಿಕ ದೂರು ನೀಡಿದ್ದಾರೆ.

ಪಕ್ಷದ ನಾಯಕನ ಫಾರ್ಮ್‌ ಹೌಸ್ ಮೇಲೆ ನಡೆದ ದಾಳಿಯನ್ನು ಬಿಜೆಪಿ ಖಂಡಿಸಿದ್ದು, ರಾಜಕೀಯ ಉದ್ದೇಶವನ್ನಿಟ್ಟುಕೊಂಡು ಪೊಲೀಸರು ಆರೋಪ ಮಾಡಿದ್ದಾರೆ. ಮಾರಕ್ ಅವರು ಹೋಮ್ ಸ್ಟೇ ನಡೆಸುತ್ತಿದ್ದರು. ಅದರಲ್ಲಿ ನಿರಾಶ್ರಿತರಿಗೆ ಆಶ್ರಯ ನೀಡಲಾಗಿತ್ತು ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT