ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಧ್ವಂಸಗೊಳಿಸಿದ ಬಿಜೆಪಿ ನಾಯಕರು: ಆರೋಪ

Last Updated 14 ಡಿಸೆಂಬರ್ 2020, 2:09 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರಡಾಳಿತ ಪ್ರದೇಶ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಧರಣಿಯಲ್ಲಿ ಕುಳಿತಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು, ಅವರ ಮನೆಯ ಸಿಸಿಟಿವಿ ಕ್ಯಾಮರಾಗಳನ್ನು ಧ್ವಂಸ ಮಾಡಿದ್ದಾರೆ ಎಂದು ದೆಹಲಿ ಸಿಎಂ ಕಚೇರಿ (ಸಿಎಂಒ) ಭಾನುವಾರ ಆರೋಪಿಸಿದೆ.

ಧರಣಿಯಲ್ಲಿ ನಿರತವಾಗಿರುವ ಬಿಜೆಪಿ ನಾಯಕರು ಮುಖ್ಯಮಂತ್ರಿ ಮನೆಯ ಸಿಸಿಟಿವಿ ಕ್ಯಾಮರಾಗಳನ್ನು ಒಡೆದು ಹಾಕಿದ್ದಾರೆ ಸಿಎಂಒ ಹೇಳಿಕೆಯಲ್ಲಿ ತಿಳಿಸಿದೆ.

ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ (ಎಂಸಿಡಿ) ಮೇಯರ್‌ಗಳು ಹಾಗೂ ಪುರಸಭೆಯ ಮುಖಂಡರು ಕೇಜ್ರಿವಾಲ್ ಅವರ ನಿವಾಸದ ಹೊರಗೆ ಧರಣಿಯಲ್ಲಿ ನಿರತವಾಗಿದ್ದಾರೆ. ದೆಹಲಿ ಸರಕಾರದಿಂದ 13000 ಕೋಟಿ ರೂ. ಬಾಕಿ ಇರುವ ಅನುದಾನ ಮೊತ್ತವನ್ನು ಪಡೆಯುವ ಬೇಡಿಕೆ ಇರಿಸಿದ್ದಾರೆ. ಭಾನುವಾರವು ರಾಜಧಾನಿಯ ವಿವಿಧೆಡೆಗಳಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು.

ಈ ಮೊದಲು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವುದಾಗಿ ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಏತನ್ಮಧ್ಯೆ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಕವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಂದು ದಿನದ ಉಪವಾಸ ಕೈಗೊಳ್ಳುವುದಾಗಿ ಭಾನುವಾರ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT