ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತಾರ್‌ಪುರ ಕಾರಿಡಾರ್‌ ತೆರೆಯುವಂತೆ ಪ್ರಧಾನಿ ಮೋದಿಗೆ ಪಂಜಾಬ್ ಬಿಜೆಪಿ ಮನವಿ

Last Updated 14 ನವೆಂಬರ್ 2021, 13:59 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನ ಬಿಜೆಪಿ ನಾಯಕರ ನಿಯೋಗವು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಗುರುಪೂರ್ಣಿಮೆಗೆ ಮೊದಲುಕರ್ತಾರ್‌ಪುರ ಕಾರಿಡಾರ್‌ ಅನ್ನು ಸಾರ್ವಜನಿಕರಿಗೆ ಮತ್ತೆ ಮುಕ್ತಗೊಳಿಸುವಂತೆ ಮನವಿ ಮಾಡಿದೆ.

ಕೋವಿಡ್‌–19ನಿಂದಾಗಿ ಪಾಕಿಸ್ತಾನದ ಕರ್ತಾರ್‌ಪುರದ ಗುರುದ್ವಾರ ದರ್ಬಾರ್‌ ಸಾಹಿಬ್‌ಗೆ ಮಾರ್ಚ್‌, 2020ರಂದು ತೀರ್ಥಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

‘ಪಂಜಾಬ್‌ನ 11 ನಾಯಕರನ್ನು ಒಳಗೊಂಡ ನಿಯೋಗವು ಮೋದಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿತು. ಈ ವೇಳೆ ಗುರು ನಾನಕ್‌ ದೇವ್‌ ಅವರ ಭಕ್ತರ ಭಾವನೆಗಳನ್ನು ಪರಿಗಣಿಸುವಂತೆ ಅವರಲ್ಲಿ ಮನವಿ ಮಾಡಲಾಯಿತು. ಈ ಬಗ್ಗೆ ಚಿಂತನೆ ಚಿಂತನೆ ನಡೆಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದರು’ ಎಂದು ಪಂಜಾಬ್‌ನ ಬಿಜೆಪಿ ಘಟಕದ ಅಧ್ಯಕ್ಷ ಅಶ್ವಾನಿ ಶರ್ಮಾ ಅವರು ಪಿಟಿಐಗೆ ತಿಳಿಸಿದರು.

ಗುರು ನಾನಕ್‌ ದೇವ್‌ ಅವರ ಜನ್ಮ ದಿನಾಚರಣೆಯ ಅಂಗವಾಗಿ ಗುರು‍ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ ವರ್ಷ ನವೆಂಬರ್‌ 19ರಂದು ಗುರು‍ಪೂರ್ಣಿಮೆ ಆಚರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT