ಮಂಗಳವಾರ, ಅಕ್ಟೋಬರ್ 20, 2020
23 °C

ಜಮ್ಮು: ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ನಾಯಕನ ಅಂಗರಕ್ಷಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಬಿಜೆಪಿ ನಾಯಕ ಜುಲ್‌ಫ್ಕರ್‌ ಪಠಾಣ್ ಅವರ ಅಂಗ ರಕ್ಷಕ, ಗಾಳಿಯಲ್ಲಿ ಕೆಲ ಸುತ್ತು ಗುಂಡು ಹಾರಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾಲಕೋಟ್‌ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದರು. 

‘ಬಿಜೆಪಿ ನಾಯಕ ಜುಲ್‌ಫ್ಕರ್‌ ಪಠಾಣ್‌ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿಯು (ಪಿಎಸ್‌ಒ), ಪಠಾಣ್‌ ಅವರ ಮನೆ ಬಳಿ ಸಂಶಯಾಸ್ಪದ ಚಟುವಟಿಕೆಯನ್ನು ಗಮನಿಸಿದ್ದಾರೆ. ಹಾಗಾಗಿ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಬಿಜೆಪಿ ನಾಯಕನ ಮನೆ ಸುತ್ತಲೂ ಪೊಲೀಸರನ್ನು ನಿಯೋಜಿಸಲಾಗಿದ್ದು, ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಅವರಿಗೆ ಸಂಶಯಾಸ್ಪದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ’ ಎಂದು ಅವರು ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು