ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ಶೂಟೌಟ್‌: ಬಿಜೆಪಿ ಮುಖಂಡನ ಪತ್ನಿ ಸಾವು, ಪೊಲೀಸರ ವಿರುದ್ಧವೇ ಪ್ರಕರಣ

Last Updated 13 ಅಕ್ಟೋಬರ್ 2022, 7:24 IST
ಅಕ್ಷರ ಗಾತ್ರ

ಡೆಹ್ರಾಡೂನ್: ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿಯು ಅಡಗಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಬಿಜೆಪಿ ಮುಖಂಡರೊಬ್ಬರ ಪತ್ನಿ ಸಾವನ್ನಪ್ಪಿದ್ದಾರೆ.

ಆರೋಪಿ ಜಾಫರ್‌ನನ್ನು ಬಂಧಿಸಲು ಉತ್ತರ ಪ್ರದೇಶದ ಮೊರಾದಾಬಾದ್‌ ಪೊಲೀಸರು ಉತ್ತರಾಖಂಡದ ಜಸ್ಪುರ್‌ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಆರೋಪಿ ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮೃತ ಮಹಿಳೆಯನ್ನು ಬಿಜೆಪಿ ನಾಯಕ ಗುರ್ತಾಜ್ ಭುಲ್ಲರ್ ಅವರ ಪತ್ನಿ ಗುರುಪ್ರೀತ್ ಕೌರ್ ಎಂದು ಗುರುತಿಸಲಾಗಿದೆ.

ಜಾಫರ್‌, ಭುಲ್ಲರ್ ಅವರ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಎಂದು ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ. ಇತ್ತ ಗುರುಪ್ರೀತ್ ಕೌರ್ ಸಾವಿನ ಬೆನ್ನಲ್ಲೇ ಕೋಪಗೊಂಡ ಗ್ರಾಮಸ್ಥರು ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದಾರೆ. ಜತೆಗೆ ಉತ್ತರ ಪ್ರದೇಶ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

‘ಜಾಫರ್‌, ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಆತನ ಸುಳಿವು ನೀಡಿದವರಿಗೆ ₹50 ಸಾವಿರ ಬಹುಮಾನ ಘೋಷಣೆ ಮಾಡಲಾಗಿತ್ತು. ಆತ ಭರತ್‌ಪುರ ಗ್ರಾಮದಲ್ಲಿ ಇರುವ ಕುರಿತು ಮಾಹಿತಿ ಸಿಕ್ಕಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರ ತಂಡ ಉತ್ತರಾಖಂಡದ ಜಸ್ಪುರ್‌ಗೆ ತೆರಳಿತ್ತು. ಆದರೆ, ಗ್ರಾಮಸ್ಥರು ಪೊಲೀಸರನ್ನು ಹಿಡಿದು ಕೂಡಿಹಾಕಿದ್ದಾರೆ. ಜತೆಗೆ ಪೊಲೀಸರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡಿದ್ದಾರೆ ಎಂದು ಮೊರಾದಾಬಾದ್‌ನ ಹಿರಿಯ ಪೊಲೀಸ್ ಅಧಿಕಾರಿ ಶಲಭ್ ಮಾಥುರ್ ಹೇಳಿದ್ದಾರೆ.

ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಾಥುರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT