ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಬೆಂಬಲ; ಎಎಪಿ ಸರ್ಕಾರವನ್ನು ಶಿಕ್ಷಿಸುತ್ತಿರುವ ಬಿಜೆಪಿ: ಕೇಜ್ರಿವಾಲ್

ರೈತರಿಗಾಗಿ ಯಾವ ತ್ಯಾಗವನ್ನು ಮಾಡಲು ಸಿದ್ಧ: ಕೇಜ್ರಿವಾಲ್
Last Updated 4 ಏಪ್ರಿಲ್ 2021, 12:35 IST
ಅಕ್ಷರ ಗಾತ್ರ

ಚಂಡೀಗಡ: ಕೇಂದ್ರ ಸರ್ಕಾರದ ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿದ್ದಕ್ಕಾಗಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಭಾರತೀಯ ಜನತಾ ಪಕ್ಷವು (ಬಿಜೆಪಿ) ಶಿಕ್ಷಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕಿಂತಲೂ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ರಾಷ್ಟ್ರ ರಾಜಧಾನಿ ವಲಯ ದೆಹಲಿ ತಿದ್ದುಪಡಿ ಮಸೂದೆಯನ್ನು (ಎನ್‌ಸಿಟಿ) ಜಾರಿಗೆ ತರಲಾಗಿದೆ.

ಲೆಫ್ಟಿನೆಂಟ್ ಗವರ್ನರ್‌‌ಗೆ ಹೆಚ್ಚಿನ ಅಧಿಕಾರ ನೀಡುವ ಮೂಲಕ ಸಂವಿಧಾನಬದ್ಧವಾಗಿ ಜನರಿಂದ ಚುನಾಯಿತ ಸರ್ಕಾರದ ಕಾರ್ಯಚಟುವಟಿಕೆಗಳಿಗೆ ಅಡ್ಡಿ ಪಡಿಸುವ ಇರಾದೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ರೈತರ 'ಮಹಾಪಂಚಾಯತ್' ಅನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ರೈತರು ಹಾಗೂ ಅವರ ಹೋರಾಟವನ್ನು ಬೆಂಬಲಿಸುವುದಕ್ಕಾಗಿ ತಾವು ತ್ಯಾಗ ಮಾಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ.

ರೈತರ ಪ್ರತಿಭಟನೆಯನ್ನು ವಿರೋಧಿಸುವವರು ದೇಶದ್ರೋಹಿಗಳು. ಕೇಜ್ರಿವಾಲ್ ಅವರನ್ನು ಶಿಕ್ಷಿಸಲು ಸಂಸತ್ತಿನಲ್ಲಿ ಎನ್‌ಸಿಟಿ ಮಸೂದೆ ಮಂಡಿಸಿದ್ದಾರೆ. ನಾವೀಗ ಸಮಸ್ಯೆ ಅನುಭವಿಸುತ್ತಿದ್ದೇವೆ. ರೈತರ ಅಂದೋಲನವನ್ನು ಬೆಂಬಲಿಸಿದ್ದಕ್ಕಾಗಿ ನಮ್ಮನ್ನು ಶಿಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಎಲ್ಲ ಅಧಿಕಾರವೀಗ ಲೆಫ್ಟಿನೆಂಟ್ ಗವರ್ನರ್ ಕೈಯಲ್ಲಿದೆ. ಇದು ಯಾವ ರೀತಿಯ ಕಾನೂನು? 62 ಸ್ಥಾನಗಳನ್ನು ಗೆದ್ದರೂ ನಮ್ಮ ಪಕ್ಷಕ್ಕೆ ಯಾವುದೇ ಅಧಿಕಾರವಿಲ್ಲ. ರೈತರ ಅಂದೋಲನವನ್ನು ಬೆಂಬಲಿಸಿದ್ದಕ್ಕಾಗಿ ಕೇಜ್ರಿವಾಲ್ ಅವರಿಗೆ ಶಿಕ್ಷೆಯಾಗಿದೆ ಎಂದು ಬಿಜೆಪಿಯ ಸದಸ್ಯರು ಸಂಸತ್ತಿನಲ್ಲಿ ಹೇಳಿದ್ದಾರೆ. ನಾನವರಿಗೆ ಹೇಳಬಯಸುವುದೇನೆಂದರೆ, ನಮ್ಮ 300 ಮಂದಿ ರೈತರು ಪ್ರಾಣವನ್ನು ಅರ್ಪಿಸಿದ್ದಾರೆ. ಈ ಆಂದೋಲನಕ್ಕಾಗಿ ಕೇಜ್ರಿವಾಲ್ ಸಾಯಬೇಕಾದರೂ ನಿಮ್ಮ ಶಿಕ್ಷೆಗೆ ನಾವು ಹೆದರುವುದಿಲ್ಲ. ರೈತರ ಅಂದೋಲನಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂದವರು ಘೋಷಿಸಿದ್ದಾರೆ.

ನಮ್ಮನ್ನು ಹಿತೈಷಿಗಳಂತೆ ರೈತರು ನೋಡುತ್ತಿದ್ದಾರೆ. ಕೇಂದ್ರ ಸರ್ಕಾರವು ಯಾವ ಶಿಕ್ಷೆ ನೀಡಿದರೂ ನಾವದಕ್ಕೆ ಹೆದರುವುದಿಲ್ಲ. ರೈತರ ಪ್ರತಿಭಟನೆಯನ್ನು ಬೆಂಬಲಿಸುವುದು ದೇಶದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದವರು ಹೇಳಿದ್ದಾರೆ.

ಈ ಅಂದೋಲನದ ಪರವಾಗಿರುವ ಯಾವುದೇ ವ್ಯಕ್ತಿ ದೇಶಭಕ್ತನಾಗಿದ್ದು, ರೈತ ಪ್ರತಿಭಟನೆಯನ್ನು ವಿರೋಧಿಸುವವರು ದೇಶದ್ರೋಹಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಆರು ವರ್ಷಗಳಲ್ಲಿ ಶಾಲೆಗಳು, ಆಸ್ಪತ್ರೆಗಳು ಹಾಗೂ ಉಚಿತ ನೀರಿನ ವ್ಯವಸ್ಥೆಕಲ್ಪಿಸುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಎಎಪಿ ಸರ್ಕಾರ ಹಮ್ಮಿಕೊಂಡಿದೆ. ಆದರೆ ದೆಹಲಿಯ ಅಭಿವೃದ್ಧಿ ಕಾರ್ಯಗಳಿಗೆ ಲೆಫ್ಟಿನೆಂಟ್ ಗವರ್ನರ್ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವು ಅಡ್ಡಿಪಡಿಸಲು ಬಯಸುತ್ತಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT