ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಿ ‌ಪ್ರಮಾಣ ವಚನ ಸಮಾರಂಭ: ದೇವಸ್ಥಾನದಲ್ಲಿ ಪೂಜೆ, ವಾಹನಗಳ ಮೇಲೆ ಧ್ವಜ ಕಡ್ಡಾಯ

ಯೋಗಿ ‌ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುವ ಬಿಜೆಪಿ ಕಾರ್ಯರ್ತರಿಗೆ ಸೂಚನೆ
Last Updated 21 ಮಾರ್ಚ್ 2022, 19:31 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರುವ ಪಕ್ಷದ ಕಾರ್ಯಕರ್ತರು, ಇಲ್ಲಿನ ಇಕಾನಾ ಮೈದಾನ ಪ್ರವೇಶಿಸುವ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಬೇಕು. ತಾವು ಬರುವ ವಾಹನದ ಮೇಲೆ ಪಕ್ಷದ ಧ್ವಜವನ್ನು ಹಾಕುವುದು ಕಡ್ಡಾಯ ಎಂದು ಜಿಲ್ಲಾ ಘಟಕಗಳಿಗೆ ಬಿಜೆಪಿ ರವಾನಿಸಿರುವ ಸಂದೇಶದಲ್ಲಿ ಸೂಚನೆ ನೀಡಲಾಗಿದೆ.

ಸಾಹಿತಿಗಳು, ವೃತ್ತಿಪರರು, ವೈದ್ಯರು, ಎಂಜಿನಿಯರ್‌ಗಳು, ಸ್ವಾಮೀಜಿಗಳು ಹಾಗೂ ಧಾರ್ಮಿಕ ಮುಖಂಡರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಲಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರದಿಂದ ತಲಾ ಇಬ್ಬರು ಕಾರ್ಯಕರ್ತರಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರವೇಶವಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಾಗಲಿದ್ದಾರೆ. ಪಂಚಾಯಿತಿಗಳ ಮುಖ್ಯಸ್ಥರು ಮತ್ತು ಸ್ಥಳೀಯ ಸಂಸ್ಥೆಗಳ ಮೇಯರ್‌ಗಳೂ ಭಾಗಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT