ಸೋಮವಾರ, ಮೇ 17, 2021
29 °C

ಪಶ್ಚಿಮ ಬಂಗಾಳ: ಬಿಜೆಪಿ ಸದಸ್ಯನ ಶವ ಪತ್ತೆ, ಟಿಎಂಸಿ ಕೈವಾಡ ಎಂದ ಬಿಜೆಪಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಕ್‌ದಾಹ್‌ (ಪಶ್ಚಿಮ ಬಂಗಾಳ): ‘ಪಶ್ಚಿಮ ಬಂಗಾಳದ ನಾಡಿಯ ಜಿಲ್ಲೆಯ ಚಕ್‌ದಾಹ್‌ನಲ್ಲಿ ಭಾನುವಾರ ಮುಂಜಾನೆ ಬಿಜೆಪಿ ಸದಸ್ಯರೊಬ್ಬರ ಮೃತದೇಹ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದರು.

ದಿಲೀ‍ಪ್‌ ಕೀರ್ತನಿಯ(31) ಮೃತರು. ಈ ಹಿನ್ನೆಲೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿರುವ ಸ್ಥಳೀಯ ಬಿಜೆಪಿ ಕಾರ್ಯಕರ್ತರು, ಟಿಎಂಸಿಯೇ ಇದಕ್ಕೆ ಹೊಣೆ ಎಂದು ಆರೋಪಿಸಿದ್ದಾರೆ.

‘ಶನಿವಾರ ರಾತ್ರಿ ವೇಳೆ ಮೂತ್ರವಿಸರ್ಜನೆಗೆಂದು ದಿಲೀಪ್‌ ಮನೆಯಿಂದ ಹೊರ ಹೋಗಿದ್ದರು. ಆದರೆ ಬಹಳ ಸಮಯದ ಬಳಿಕವೂ ಮನೆಗೆ ಹಿಂತಿರುಗಲಿಲ್ಲ. ಹಾಗಾಗಿ ಅವರಿಗಾಗಿ ಶೋಧ ನಡೆಸುವಾಗ ಮನೆಯಿಂದ ಸ್ವಲ್ಪ ದೂರದಲ್ಲಿ ಅವರು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಅವರ ಗುಪ್ತಾಂಗದ ಬಳಿ ಹಲವು ಗಾಯಗಳಾಗಿದ್ದವು’ ಎಂದು ಪೊಲೀಸರು ಹೇಳಿದರು.

ಈ ಕ್ಷೇತ್ರದಲ್ಲಿ ಶನಿವಾರ ಐದನೇ ಹಂತದ ಮತದಾನ ನಡೆದಿತ್ತು.

ಇದನ್ನೂ ಓದಿ... ಕೋವಿಡ್: ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಸಿಬಲ್ ಆಗ್ರಹ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು