ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ ಅತ್ಯಾಚಾರ ಪ್ರಕರಣದ ವಿಡಿಯೊ ಹಂಚಿಕೊಂಡ ಬಿಜೆಪಿ ಶಾಸಕ: ಪ್ರಕರಣ ದಾಖಲು

Last Updated 7 ಜೂನ್ 2022, 7:10 IST
ಅಕ್ಷರ ಗಾತ್ರ

ಹೈದರಾಬಾದ್‌: ಜುಬಿಲಿ ಹಿಲ್ಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಚಿತ್ರಗಳು ಮತ್ತು ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ತೆಲಂಗಾಣದ ದುಬ್ಬಾಕ ಕ್ಷೇತ್ರದ ಬಿಜೆಪಿ ಶಾಸಕ ಎಂ. ರಘುನಂದನ್ ರಾವ್ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಕೀಲರೊಬ್ಬರ ದೂರಿನ ಮೇರೆಗೆ ರಾವ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 228 ಎ ಅಡಿಯಲ್ಲಿ ಅಬಿಡ್‌ ರೋಡ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೋಮವಾರ ತಡರಾತ್ರಿ ಪ್ರಕರಣ ದಾಖಲಾಗಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವವರಿಗೆ ಐಪಿಸಿ ಸೆಕ್ಷನ್ 228ಎ ಅಡಿಯಲ್ಲಿ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಶಾಸಕರ ನಡೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಸಂತ್ರಸ್ತೆಯ ಗುರುತನ್ನು ತಾನು ಬಹಿರಂಗಪಡಿಸಿಲ್ಲ ಎಂದು ಅವರು ವಾದಿಸಿದ್ದಾರೆ. ಘಟನೆಯಲ್ಲಿ ಎಐಎಂಐಎಂ ಶಾಸಕರ ಪುತ್ರನ ಕೈವಾಡವಿದೆ ಎಂಬುದನ್ನು ಬಹಿರಂಗಪಡಿಸಲು ನಾನು ಬಯಸಿದ್ದೆ ಎಂದು ಅವರು ಹೇಳಿದ್ದಾರೆ.

‘ಪೊಲೀಸರು ಶಾಸಕರ ಮಗನಿಗೆ ಕ್ಲೀನ್ ಚಿಟ್ ನೀಡುವ ಮೂಲಕ ತನಿಖೆಯನ್ನು ಹಳಿತಪ್ಪಿಸುತ್ತಿದ್ದಾರೆ. ಹೀಗಾಗಿ ವಿಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿದ್ದೇನೆ’ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಈ ಕುರಿತ ಪ್ರಕರಣ ಎದುರಿಸಲು ಸಿದ್ಧ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್‌ ಮಾಡಿದ ಇಬ್ಬರು ಯ್ಯೂಟೂಬರ್‌ಗಳ ವಿರುದ್ಧವೂ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಹೈದರಾಬಾದ್‌ ನಗರದ ಜುಬಿಲಿ ಬಂಜಾರಾ ಹಿಲ್ಸ್‌ನ ಪಬ್‌ವೊಂದರಲ್ಲಿ ಪಾರ್ಟಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು, ಮೂವರು ಬಾಲಕರು ಸೇರಿ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣ ಇತ್ತೀಚೆಗೆ ಬಹಿರಂಗವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT